ಮಾಜಿ ಸಚಿವ ಬಿ.ಸಿ.ನಾಗೇಶ್ ನಿಧನ

Update: 2026-08-18 23:01 IST

ಬೆಂಗಳೂರು : ತಿಪಟೂರು ಕ್ಷೇತ್ರದ ಮಾಜಿ ಶಾಸಕ ಮತ್ತು ರಾಜ್ಯದ ಮಾಜಿ ಶಿಕ್ಷಣ ಸಚಿವರೂ ಆದ ಬಿ.ಸಿ.ನಾಗೇಶ್ (65 ವರ್ಷ) ಅವರು ಮಂಗಳವಾರ ರಾತ್ರಿ 9 ಗಂಟೆಗೆ ಬೆಂಗಳೂರಿನ ತಮ್ಮ ಮಗಳ ಮನೆಯಲ್ಲಿ ನಿಧರಾಗಿದ್ದಾರೆ. ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದರು.

ಬಿ.ಸಿ.ನಾಗೇಶ್ ಅವರು ಪ್ರಾಥಮಿಕ ಶಿಕ್ಷಣ ಸಚಿವರಾಗಿ ಬಿಜೆಪಿ ಆಡಳಿತಾವಧಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ನಾಳೆ (ಆ.19) ಬೆಳಗ್ಗೆ 7 ಗಂಟೆಯಿಂದ 8 ಗಂಟೆಯ ವರೆಗೆ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪಾರ್ಥಿವ ಶರೀರದ ದರ್ಶನ ವ್ಯವಸ್ಥೆ ಇರುತ್ತದೆ ಮತ್ತು ಅಂತ್ಯ ಸಂಸ್ಕಾರವು ತಿಪಟೂರಿನಲ್ಲಿ ನೆರವೇರಲಿದೆ.

ಬಿ.ಸಿ.ನಾಗೇಶ್ ನಿಧನಕ್ಕೆ ವಿಜಯೇಂದ್ರ ಸಂತಾಪ

"ಪಕ್ಷದ ಹಿರಿಯ ನಾಯಕರು, ತಿಪಟೂರು ಕ್ಷೇತ್ರದ ಮಾಜಿ ಶಾಸಕರು, ಮಾಜಿ ಸಚಿವರೂ ಆದ  ಬಿ.ಸಿ.ನಾಗೇಶ್ ಅವರು ಅಕಾಲಿಕವಾಗಿ ವಿಧಿವಶರಾದ ಸುದ್ದಿ ತೀವ್ರ ಆಘಾತ ಹಾಗೂ ದುಃಖವನ್ನು ಉಂಟು ಮಾಡಿದೆ. ಸರಳತೆ, ವೈಚಾರಿಕ ಬದ್ಧತೆ, ನಿಷ್ಠೆ ಹಾಗೂ ಜನಪರ ಕಾಳಜಿಯ ವ್ಯಕ್ತಿತ್ವದಿಂದಲೇ ಹೆಸರಾಗಿದ್ದ ಅವರು, ಶಾಸಕರಾಗಿ ಹಾಗೂ ಸಚಿವರಾಗಿ ಮಾಡಿರುವ ಸೇವೆ, ಶಿಕ್ಷಣ ಕ್ಷೇತ್ರದಲ್ಲಿ ತಂದ ಸುಧಾರಣೆಗಳು ಮತ್ತು ಪಕ್ಷದ ಸಂಘಟನೆಗೆ ನೀಡಿದ ಕೊಡುಗೆ ಅಪಾರ. ಅವರ ನಿರ್ಗಮನದಿಂದ ನಮ್ಮ ಪಕ್ಷ ಹಾಗೂ ನಾಡು ಒಬ್ಬ ಸಜ್ಜನಿಕೆಯ ಜನಪ್ರತಿನಿಧಿ ಹಾಗೂ ಆದರ್ಶ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ, ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ"

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News