×
Ad

ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಬಿಜೆಪಿಗೆ ರಾಜಿನಾಮೆ

Update: 2025-04-19 18:19 IST

ಎ.ಟಿ.ರಾಮಸ್ವಾಮಿ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಬಿಜೆಪಿಗೆ ರಾಜಿನಾಮೆ ನೀಡಿದ್ದಾರೆ.

ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಪತ್ರ ಬರೆದಿರುವ ಅವರು, ವಿಶ್ವ ತಾಪಮಾನ ವಿಪರೀತ ಏರಿಕೆಯಿಂದಾಗಿ ಹವಾಮಾನದ ಅಸಮತೋಲನ ಉಂಟಾಗಿದೆ. ಇದರಿಂದ, ನೆರೆ, ಬರ, ಚಂಡಮಾರುತ, ಭೂ ಕಂಪನಗಳು ಸೃಷ್ಟಿಯಾಗುತ್ತಿವೆ ಎಂದು ತಿಳಿಸಿದ್ದಾರೆ.

ನಾವು ಕುಡಿಯುವ ನೀರು, ಉಸಿರಾಡುವ ಗಾಳಿ, ಸೇವಿಸುವ ಆಹಾರ ವಿಷಪೂರಿತವಾಗಿವೆ. ಬೆಟ್ಟ, ಗುಡ್ಡ, ಅರಣ್ಯಗಳ ನಾಶದಿಂದ ನದಿ, ತೊರೆಗಳೂ ಬತ್ತಿ ಹೋಗಿವೆ. ಅಂರ್ತಜಲ ಕುಸಿದಿದೆ. ಜೀವ ಸಂಕುಲಗಳಿಗೆ ಸಂಕಷ್ಟ ಬಂದೊದಗಿದೆ. ಈ ಹೊತ್ತಿನಲ್ಲಾದರೂ ನಾವು ಜನರಲ್ಲಿ ಜಾಗೃತಿ ಮೂಡಿಸಿ ಪರಿಸರ ಸಂರಕ್ಷಣೆ ಕಾರ್ಯ ಮಾಡಬೇಕಾಗಿದೆ ಎಂದು ರಾಮಸ್ವಾಮಿ ಹೇಳಿದ್ದಾರೆ.

ಪರಿಸರ ಉಳಿದರೆ ಜೀವ ಸಂಕುಲಗಳೂ ಉಳಿಯುತ್ತವೆ. ಈ ಸನ್ನಿವೇಶದಲ್ಲಿ ರಾಜಕಾರಣಕ್ಕಿಂತ ಪರಿಸರ ಸಂರಕ್ಷಣೆ ಅತ್ಯಂತ ಮಹತ್ವವೆಂದು ಭಾವಿಸಿರುತ್ತೇನೆ. ನನ್ನ ಪೂರ್ಣ ಸಮಯವನ್ನು, ನನ್ನ ಬದುಕಿನ ಕೃಷಿಯ ಜೊತೆಗೆ ಪರಿಸರ ಸಂರಕ್ಷಣೆಯ ಕೆಲಸದಲ್ಲಿ ತೊಡಗಿಸಿಕೊಳ್ಳಲು ತೀರ್ಮಾನಿಸಿರುತ್ತೇನೆ. ಈ ಬಗ್ಗೆ ಈಗಾಗಲೆ ನಾನು ಎ.11ರಂದು ದೂರವಾಣಿ ಮೂಲಕ ತಮ್ಮ ಜೊತೆ ಮಾತನಾಡಿದ್ದೇನೆ. ಆದುದರಿಂದ, ನಾನು ಬಿಜೆಪಿ ಸದಸ್ಯತ್ವಕ್ಕೆ ರಾಜಿನಾಮೆ ನೀಡುತ್ತಿದ್ದೇನೆ ಎಂದು ರಾಮಸ್ವಾಮಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News