×
Ad

ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್ ನಿಧನ

Update: 2023-07-09 14:53 IST

ಬೆಂಗಳೂರು, ಜು.9: ಧಾರವಾಡ ಜಿಲ್ಲೆ ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್ (76) ರವಿವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು

ಮೃತರು ಪುತ್ರ, ಪುತ್ರಿ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಲಘಟಗಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂತೋಷ ಲಾಡ್ ವಿರುದ್ಧ ಗೆಲುವು ಸಾಧಿಸಿ ಮೊದಲ ಬಾರಿಗೆ ಶಾಸಕರಾಗಿದ್ದರು. ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರು.

ಮೃತರ ಅಂತ್ಯಕ್ರಿಯೆ ಕಲಘಟಗಿಯಲ್ಲಿ ಸೋಮವಾರ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News