×
Ad

ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್‌ ಉಚ್ಚಾಟನೆ

Update: 2024-05-25 19:30 IST

ರಘುಪತಿ ಭಟ್‌

ಬೆಂಗಳೂರು : ವಿಧಾನಪರಿಷತ್ ಚುನಾವಣೆಯಲ್ಲಿ ನೈಋತ್ಯ ಪದವೀಧರರ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ರಘುಪತಿ ಭಟ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಉಚ್ಚಾಟನೆ ಆದೇಶದಲ್ಲಿ ಏನಿದೇ?: ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್ ಚುನಾವಣೆಗೆ ನೈಋತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ.

ಆದುದರಿಂದ, ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News