ಬೆಂಗಳೂರು : ರಾಜ್ಯ ಸರಕಾರವು ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.

ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಪ್ರಭುಲಿಂಗ ಕಾವಲಿಕಟ್ಟಿ ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾಗಿ, ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ಅವರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತೆ(ಚುನಾವಣೆ, ವಿಪತ್ತು ನಿರ್ವಹಣೆ, ಸಾರ್ವಜನಿಕ ಸಂಪರ್ಕ ಮತ್ತು ಸಂಯೋಜನೆ)ಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಇಡಿಸಿಎಸ್ ನಿರ್ದೇಶಕ ಭೋಯಾರ್ ಹರ್ಷಲ್ ನಾರಾಯಣರಾವ್ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಹಾಗೂ ರಾಜ್ಯ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯ ಮುಖ್ಯಸ್ಥ ಪ್ರಕಾಶ್ ಜಿ.ಟಿ.ನಿಟ್ಟಲಿ ಅವರನ್ನು ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor