×
Ad

ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ಸಾವು

Update: 2023-09-17 12:59 IST
ಸಾಂದರ್ಭಿಕ ಚಿತ್ರ

ದೊಡ್ಡಬಳ್ಳಾಪುರ: ರಾತ್ರಿ ಮಲಗಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಲೆಯರಹಳ್ಳಿಯಲ್ಲಿ ವರದಿಯಾಗಿದೆ.

ಮನೆಯಲ್ಲಿ ರಾತ್ರಿ ಮಲಗಿದ್ದ ಒಂದೇ ಕುಟುಂಬದ ನಾಲ್ವರ ಮೃತದೇಹ ರವಿವಾರ ಬೆಳಗ್ಗೆ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. 

ನೇಪಾಳ ಮೂಲದವರಾದ ಕಾಲೆ ಸರೆರಾ (60), ಲಕ್ಷ್ಮಿ ಸರೇರಾ (50), ಉಷಾ ಸರೇರಾ (40), ಮತ್ತು ಪೊಲ್ ಸರೇರಾ (16) ಮೃತಪಟ್ಟವರು ಎಂದು ಗುರುತಿಸಲಾಗಿದೆ. 

ಕಳೆದ 8 ದಿನಗಳಿಂದಷ್ಟೆ ಕೆಲಸ ಹರಸಿ ದೊಡ್ಡಬಳ್ಳಾಪುರಕ್ಕೆ ಬಂದಿದ್ದ ಈ ಕುಟುಂಬ, ಇದೀಗ ಅನುಮಾನಸ್ಪದ ರೀತಿಯಲ್ಲಿ ಸಾವಿಗೀಡಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಇನ್ ಸ್ಪೆಕ್ಟರ್ ಹರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News