×
Ad

ಲಾಕಪ್ ಡೆತ್ ಪ್ರಕರಣ: ಸಿಒಡಿ ತನಿಖೆಗೆ ಆದೇಶ : ಗೃಹ ಸಚಿವ ಡಾ.ಜಿ.ಪರಮೇಶ್ವರ್

Update: 2025-12-03 21:33 IST

ಬೆಂಗಳೂರು : ವಿವೇಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಬ್ಬ ಇನ್ಸ್‍ಪೆಕ್ಟರ್ ಸಹಿತ ಮೂವರು ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದ್ದು, ಸಿಒಡಿ ತನಿಖೆಗೆ ಆದೇಶಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಸಿಒಡಿ ತನಿಖೆಯ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಅವರು ಮಾಹಿತಿ ನೀಡಿದರು.

ಏನಿದು ಪ್ರಕರಣ?: ನ.15ರಂದು ದರ್ಶನ್ ಎಂಬಾತ ಮದ್ಯದ ಅಮಲಿನಲ್ಲಿ ರಸ್ತೆಯಲ್ಲಿ ಗಲಾಟೆ ಮಾಡುತ್ತಿದ್ದ ಎನ್ನುವ ದೂರಿನ್ವಯ ಆತನನ್ನು ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ನಂತರ 8 ದಿನ ಪುನರ್ವಸತಿ ಕೇಂದ್ರಕ್ಕೆ ಸೇರಿಸಿದಾಗ ದರ್ಶನ್ ಅನುಮಾನಸ್ಪದವಾಗಿ ಮೃತಪಟ್ಟಿದ್ದ. ಈ ಸಂಬಂಧ ದರ್ಶನ್ ತಾಯಿ ಪೊಲೀಸರ ಮೇಲೆ ದೂರು ನೀಡಿದ ಹಿನ್ನೆಲೆ ಪಿಐ ಸೇರಿ ಮೂವರನ್ನು ಅಮಾನುತು ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News