×
Ad

ಪೊಲೀಸ್ ಇಲಾಖೆಯಲ್ಲಿ 3600 ಖಾಲಿ ಹುದ್ದೆಗಳ ಭರ್ತಿಗೆ ಶೀಘ್ರ ಅಧಿಸೂಚನೆ : ಜಿ.ಪರಮೇಶ್ವರ್

Update: 2025-12-18 18:31 IST

ಬೆಳಗಾವಿ : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,600 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು, ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಗುರುವಾರ ವಿಧಾನಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಜಗದೇವ್ ಗುತ್ತೇದಾರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಒಳಮೀಸಲಾತಿ ಪ್ರಕ್ರಿಯೇ ಪೂರ್ವದಲ್ಲೇ ಅಧಿಸೂಚನೆ ಆಗಿದ್ದರಿಂದ ಈಗಾಗಲೇ 947 ಪಿಎಸ್ಸೈಗಳ ಭರ್ತಿ ಪ್ರಕ್ರಿಯೆ ಪೂರ್ಣಗೊಂಡು ಅಭ್ಯರ್ಥಿಗಳು ತರಬೇತಿಯಲ್ಲಿದ್ದಾರೆ. ಒಳ ಮೀಸಲು ಕಲ್ಪಿಸುವ ಪ್ರಕ್ರಿಯೆ ಪೂರ್ಣವಾಗಿದ್ದರಿಂದ ಈಗ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ಚುರುಕುಗೊಂಡಿದೆ ಎಂದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಅನುದಾನದಡಿಯಲ್ಲಿ ಕಾಳಗಿ ತಾಲೂಕಿನಲ್ಲಿ ಸಿಪಿಐ ಕಚೇರಿ ಕಟ್ಟಡ ಮತ್ತು ಸಿಪಿಐ ಸಿಬ್ಬಂದಿಗೆ ವಸತಿ ಗೃಹ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಡಾ.ಜಿ.ಪರಮೇಶ್ವರ್ ಅವರು ಸದಸ್ಯರ ಪ್ರಶ್ನೆಗೆ ಮಾಹಿತಿ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News