×
Ad

ಸ್ಯಾಂಡಲ್ ವುಡ್ ನಟ ಯಶ್ ಬರ್ತ್ ಡೇ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ಆಘಾತ; ಮೂವರು ಮೃತ್ಯು

Update: 2024-01-08 09:32 IST

Photo: facebook.com/VVani4U

ಗದಗ: ಕನ್ನಡ ಚಿತ್ರ ನಟ ರಾಕಿಂಗ್ ಸ್ಟಾರ್ ಯಶ್ ಜನ್ಮದಿನದ ಅಂಗವಾಗಿ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ತಂತಿ ತಗುಲಿ ಮೂವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ರವಿವಾರ ಮಧ್ಯರಾತ್ರಿ ನಡೆದಿದೆ.

ಮೃತರನ್ನು ಸೂರಣಗಿ ಗ್ರಾಮದ ಹನುಮಂತ ಹರಿಜನ(21), ಮುರಳಿ ನಡವಿನಮನಿ(20), ನವೀನ ಗಾಜಿ(19) ಎಂದು ಗುರುತಿಸಲಾಗಿದೆ. ಗಾಯಗೊಂಡ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಲಕ್ಷ್ಮೇಶ್ವರ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಸೋಮವಾರ ರಾಕಿಂಗ್ ಸ್ಟಾರ್ ಜನ್ಮದಿನವನ್ನು ಆಚರಿಸಲು ಮಾಡಿಕೊಂಡಿದ್ದ ಸೂರಣಗಿ ಗ್ರಾಮದ 10ಕ್ಕೂ ಹೆಚ್ಚು ಯುವಕರು, ಗ್ರಾಮದ ಅಂಬೇಡ್ಕರ್ ಸರ್ಕಲ್ ನಲ್ಲಿ 25 ಅಡಿ ಎತ್ತರದ ಬೃಹತ್ ಕಟೌಟ್ ನಿಲ್ಲಿಸುವ ವೇಳೆ ಕಟೌಟ್ ವಿದ್ಯುತ್ ತಂತಿಗೆ  ಸ್ಪರ್ಶಿಸಿ ದುರ್ಘಟನೆ ಸಂಭವಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News