ರಾಜ್ಯದ 233 ಗ್ರಾಪಂಗಳು ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಆಯ್ಕೆ
Update: 2023-09-26 22:26 IST
ಬೆಂಗಳೂರು, ಸೆ.26: ಪ್ರಸಕ್ತ ವರ್ಷದ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ವಿಶೇಷ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಲಾಗಿದ್ದು ಅ.2ರ ಗಾಂಧಿ ಜಯಂತಿಯಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಗಾಂಧಿ ಗ್ರಾಮ ಪುರಸ್ಕಾರಕ್ಕೆ ರಾಜ್ಯದ 31 ಜಿಲ್ಲೆಗಳ 233 ಗಾಮ ಪಂಚಾಯತ್ ಗಳನ್ನು ಆಯ್ಕೆ ಮಾಡಲಾಗಿದೆ. ವಿಶೇಷ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೊಸಾಡು, ಉಡುಪಿಯ 80 ಬಡಗಬೆಟ್ಟು, ಉತ್ತರ ಕನ್ನಡದ ಹಳಿಯಾಳ ತಾಲೂಕಿನ ತಟ್ಟೇಗೇರಿ ಮತ್ತು ಬೆಳವಟಿಗೆ ಗ್ರಾಮ ಪಂಚಾಯತ್ ಗಳು ಆಯ್ಕೆ ಆಗಿವೆ.
ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪುರಸ್ಕಾರಕ್ಕೆ ಆಯ್ಕೆಯಾದ ಗ್ರಾಮ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿ, ಪ್ರಶಸ್ತಿ ಸ್ವೀಕರಿಸುವಂತೆ ಪಂಚಾಯತ್ ರಾಜ್ ಆಯುಕ್ತಾಯಲವು ಪ್ರಕಟನೆಯಲ್ಲಿ ತಿಳಿಸಿದೆ.