×
Ad

ಲೋಕಾಯುಕ್ತ ಬಲೆಗೆ ಬಿದ್ದ ಗಂಗಾವತಿ ತಹಶೀಲ್ದಾರ್

Update: 2023-11-19 09:41 IST

ಕೊಪ್ಪಳ, ನ.19: ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿ ಗಂಗಾವತಿ ತಾಲೂಕು ತಹಶೀಲ್ದಾರ್ ಸಹಿತ ಇಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ಶನಿವಾರ ರಾತ್ರಿ ಬಂಧಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕು ತಹಶೀಲ್ದಾರ್ ಮಂಜುನಾಥ ಬೋಗಾವತಿ ಮತ್ತು ಅವರಿಗೆ ಸಹಕರಿಸಿ ಆರೋಪಿ ರಾಜು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದವರಾಗಿದ್ದಾರೆ.

ಅಕ್ರಮವಾಗಿ ಕೆಂಪು ಮಣ್ಣು ಸಾಗಾಟಕ್ಕೆ ನೆರವಾಗಲು ತಹಶೀಲ್ದಾರ್ ಮಂಜುನಾಥ ಒಂದು ಲಕ್ಷ ರೂ. ನೀಡುವಂತೆ ವ್ಯಕ್ತಿಯೊಬ್ಬರಿಗೆ

ಬೇಡಿಕೆ ಇಟ್ಟಿದ್ದರೆನ್ನಲಾಗಿದೆ. ಮುಂಗಡವಾಗಿ ಮಂಜುನಾಥ ಪರವಾಗಿ ರಾಜು 50 ಸಾವಿರ ರೂ. ಪಡೆದುಕೊಂಡಿದ್ದ. ಇನ್ನುಳಿದ ಹಣ ಪಡೆದುಕೊಳ್ಳುವಾಗ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಕೊಪ್ಪಳ ಲೋಕಾಯುಕ್ತ ಡಿವೈಎಸ್ಪಿ ಸಲೀಂ ಪಾಷಾ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News