×
Ad

ಗೌರಿ ಹಂತಕರಿಗೆ ಖಚಿತವಾಗಿ ಶಿಕ್ಷೆಯಾಗಲಿದೆ: ಸಿಎಂ ಸಿದ್ದರಾಮಯ್ಯ

Update: 2023-09-05 20:53 IST

ಬೆಂಗಳೂರು: 'ಗೌರಿ ಲಂಕೇಶ್ ಅವರನ್ನು ಹತ್ಯೆಗೈದ ಆರೋಪಿಗಳಿಗೆ ಖಚಿತವಾಗಿ ಶಿಕ್ಷೆಯಾಗಲಿದೆ. ಇದರಲ್ಲಿ ಅನುಮಾನವೇ ಇಲ್ಲ. ಇನ್ನೂ, ಶಿಕ್ಷೆ ಆದಾಗ ಮಾತ್ರ ಗೌರಿ ಆತ್ಮಕ್ಕೆ ಶಾಂತಿ ಸಿಗುತ್ತದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಗೌರಿ ಮೆಮೋರಿಯಲ್ ಟ್ರಸ್ಟ್ ಪತ್ರಕರ್ತೆ ಗೌರಿ ಲಂಕೇಶ್ ಸ್ಮರಣಾರ್ಥ ಟೌನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ "ಸರ್ವಾಧಿಕಾಲದ ಹೊತ್ತಲ್ಲಿ ದೇಶವನ್ನು ಮರುಕಟ್ಟುವ ಕಲ್ಪನೆ" ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

''ಇಂತಹ ಗಂಭೀರ ಪ್ರಕರಣ ಸಂಬಂಧ ಪೊಲೀಸ್ ಅಧಿಕಾರಿಗಳ ಜತೆ ಈ ಬಗ್ಗೆ ಚರ್ಚೆ ನಡೆಸಿ ಮಾಹಿತಿ ಪಡೆದಿದ್ದೇನೆ. ಸಾವಿರಕ್ಕೂ ಅಧಿಕ ಪುಟಗಳ ಆರೋಪ ಪಟ್ಟಿ ಸಲ್ಲಿಕೆಯಾಗಿ, 500ಕ್ಕೂ ಹೆಚ್ಚು ಸಾಕ್ಷಿಗಳನ್ನು ಪಟ್ಟಿ ಮಾಡಲಾಗಿದೆ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಕೂಡ ವೇಗವಾಗಿ ನಡೆಯುತ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ. ಹೀಗಾಗಿ ತನಿಖಾ ತಂಡದ ವೃತ್ತಿಪರತೆ ಮತ್ತು ಶ್ರಮ ವ್ಯರ್ಥ ಆಗುವುದಿಲ್ಲ. ಆರೋಪಿಗಳಿಗೆ ಖಂಡಿತಾ ಶಿಕ್ಷೆ ಆಗುತ್ತದೆ ಎನ್ನುವ ಭರವಸೆ ನನಗಿದೆ'' ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News