×
Ad

ಮುಖ್ಯಮಂತ್ರಿಯವರ ಪ್ರಧಾನ ಸಲಹೆಗಾರರಾಗಿ ಜಿ.ಸಿ.ಚಂದ್ರಶೇಖರ್ ನೇಮಕ

Update: 2026-07-14 13:40 IST

ಬೆಂಗಳೂರು : ಕೆಪಿಸಿಸಿ ಕಾರ್ಯಾಧ್ಯಕ್ಷ  ಜಿ.ಸಿ.ಚಂದ್ರಶೇಖರ್ ಅವರನ್ನು ಮುಖ್ಯಮಂತ್ರಿಯವರ ಪ್ರಧಾನ ಸಲಹೆಗಾರರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಈ ಕುರಿತು ಜ್ಞಾಪನ ಪತ್ರವನ್ನು ಬಿಡುಗಡೆ ಮಾಡಿದೆ.

ಮುಖ್ಯಮಂತ್ರಿಗೆ ರಾಜಕೀಯ ವ್ಯವಹಾರಗಳು ಮತ್ತು ಸಾರ್ವಜನಿಕ ಕುಂದುಕೊರತೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಸಹಾಯ ಮಾಡುವ ಜವಾಬ್ದಾರಿಯನ್ನು ಜಿ.ಸಿ. ಚಂದ್ರಶೇಖರ್ ಅವರಿಗೆ ವಹಿಸಲಾಗಿದೆ.

‘ಯಾವುದೇ ರೀತಿಯ ಸಂಭಾವನೆ, ಭತ್ಯೆ, ಗೌರವಧನ ಅಥವಾ ಇತರೆ ಯಾವುದೇ ಸೌಲಭ್ಯಗಳಿಗೆ ಅರ್ಹತೆ ಇಲ್ಲದ ಗೌರವಾಧಾರಿತ ಆಧಾರದ ಮೇಲೆ ಚಂದ್ರಶೇಖರ್ ಅವರನ್ನು ನೇಮಕ ಮಾಡಲಾಗಿದೆ’ ಎಂದು ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News