×
Ad

ಭೂ ವಿಜ್ಞಾನಿ ಪ್ರತಿಮಾ ಹತ್ಯೆ ಪ್ರಕರಣ: ಆರೋಪಿ ಕಿರಣ್‍ ನ.15ರ ವರೆಗೆ ಪೊಲೀಸ್ ಕಸ್ಟಡಿಗೆ

Update: 2023-11-06 19:44 IST
ಆರೋಪಿ ಕಿರಣ್ |  ಭೂ ವಿಜ್ಞಾನಿ ಪ್ರತಿಮಾ 

ಬೆಂಗಳೂರು, ನ. 6: ಬೆಂಗಳೂರಿನ ದೊಡ್ಡಕಲ್ಲಸಂದ್ರದ ಕುವೆಂಪು ನಗರದಲ್ಲಿ ನಡೆದಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಕೆ.ಎಸ್.ಪ್ರತಿಮಾ(40) ಅವರ ಹತ್ಯೆ ಪ್ರಕರಣದ ಆರೋಪಿ ಕಿರಣ್‍ನನ್ನು ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ 10 ದಿನಗಳ ಕಾಲ ಸೋಮವಾರ ಪೊಲೀಸ್ ಕಸ್ಟಡಿಗೆ ನೀಡಿದೆ.

ಸೋಮವಾರ ಬಂಧಿತ ಆರೋಪಿ ಕಿರಣ್‍ನನ್ನು ವೈದ್ಯಕೀಯ ತಪಾಸಣೆಯ ಬಳಿಕ ಬೆಂಗಳೂರಿನ 2ನೆ ಹೆಚ್ಚುವರಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಬಿ.ಎಸ್.ವೇದಮೂರ್ತಿ ಅವರ ಮುಂದೆ ಹಾಜರುಪಡಿಸಲಾಗಿತ್ತು. ಘಟನೆಯ ಮಾಹಿತಿ ಪಡೆದ ಮ್ಯಾಜಿಸ್ಟ್ರೇಟ್ ಅವರು ಆರೋಪಿಯನ್ನು ನ.15ರ ವರೆಗೆ ಪೊಲೀಸರ ವಶಕ್ಕೆ ನೀಡಿದ್ದಾರೆ.

ಪ್ರತಿಮಾ ಅವರ ಮಾಜಿ ಕಾರು ಚಾಲಕನಾದ ಆರೋಪಿ ಕಿರಣ್‍ನನ್ನು ಮಲೆ ಮಹದೇಶ್ವರ ಬೆಟ್ಟದಲ್ಲಿ ಬಂಧಿಸಲಾಗಿತ್ತು. ಕೆಲಸ ಕಳೆದುಕೊಂಡಿದ್ದ ಕಿರಣ್ ಕಳೆದ ಶನಿವಾರ ಪ್ರತಿಮಾ ಅವರ ಮನೆಗೆ ತೆರಳಿ ಮತ್ತೆ ಕೆಲಸಕ್ಕೆ ನೇಮಕ ಮಾಡಿಕೊಳ್ಳುವಂತೆ ಕೋರಿದ್ದ. ಇದಕ್ಕೆ ನಿರಾಕರಿಸಿದ ಕಾರಣಕ್ಕೆ ಪ್ರತಿಮಾ ಅವರನ್ನು ಕೊಲೆ ಮಾಡಿರುವುದಾಗಿ ಕಿರಣ್ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತುಡ್ಕಿ ಮೂಲದ ಪ್ರತಿಮಾ ಅವರು 2008ರಲ್ಲಿ ಭೂ ವಿಜ್ಞಾನಿಯಾಗಿ ನೇಮಕವಾಗಿದ್ದರು. 2019ರಲ್ಲಿ ಹಿರಿಯ ಭೂ ವಿಜ್ಞಾನಿಯಾಗಿ ಬಡ್ತಿ ಪಡೆದಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News