×
Ad

ʼಗೃಹಲಕ್ಷ್ಮಿʼ ಕಾರ್ಯಕ್ರಮ | ಮೈಸೂರಿಗೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

Update: 2023-08-30 12:49 IST

ಮೈಸೂರು: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲು ಸಂಸದ ರಾಹುಲ್ ಗಾಂಧಿ ವೇದಿಕೆಗೆ ಆಗಮಿಸಿದರು.

ನಗರದ ಮಹರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ವೇದಿಕೆಗೆ ಬುಧವಾರ ಆಗಮಿಸಿದ ರಾಹುಲ್ ಗಾಂಧಿ ನೆರೆದಿದ್ದ ಯಜಮಾನಿಯರನ್ನು ಕಂಡು ಪುಳಕಿತಗೊಂಡರು. ಬಳಿಕ ಜನರತ್ತ ಕೈ ಬೀಸಿ ಸಂತಸ ವ್ಯಕ್ತಪಡಿಸಿದರು.

ಬೆಂಗಳೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದರು. ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಉಪಸ್ಥಿತರಿದ್ದರು.

ನಂತರ ನೇರವಾಗಿ ಕಾರ್ಯಕ್ರಮ ನಡೆತುವ ಸ್ಥಳಕ್ಕೆ ಕಾರಿನಲ್ಲಿ ಆಗಮಿಸಿದರು.

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News