×
Ad

ಅಕ್ರಮ ಚಿನ್ನಸಾಗಣೆ ಪ್ರಕರಣ | ನಟಿ ರನ್ಯಾ ರಾವ್​ಗೆ ಸೇರಿದ 34 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

Update: 2025-07-04 21:41 IST

                                                               ರನ್ಯಾ ರಾವ್ (Photo: X) 

ಬೆಂಗಳೂರು : ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್​​ಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಈ.ಡಿ.) ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ವರದಿಯಾಗಿದೆ.

ರನ್ಯಾ ರಾವ್​ಗೆ ಸೇರಿದ ಬೆಂಗಳೂರಿನ ಅರ್ಕಾವತಿ ಬಡವಾಣೆಯಲ್ಲಿನ ನಿವೇಶ, ವಿಕ್ಟೋರಿಯಾ ಲೇಔಟ್​ನಲ್ಲಿನ ಮನೆ, ಅನೇಕಲ್​ನಲ್ಲಿನ ಕೃಷಿ ಜಮೀನು ಮತ್ತು ತುಮಕೂರಿನಲ್ಲಿನ ಜಮೀನನ್ನು ಈ.ಡಿ. ಜಪ್ತಿ ಮಾಡಿರುವುದಾಗಿ ಮೂಲಗಳು ತಿಳಿಸಿವೆ.

ಚಿನ್ನ ಕಳ್ಳಸಾಗಾಣಿಕೆ ಸಂಬಂಧಿಸಿದಂತೆ ದಾಖಲಾಗಿರುವ ಸಿಬಿಐ ಮತ್ತು ರೆವಿನ್ಯೂ ಗುಪ್ತಚರ ನಿರ್ದೇಶನಾಲಯ (ಡಿಆರ್​ಐ) ಒಪ್ಪಿಗೆ ಮೇರೆಗೆ ಜಾರಿ ನಿರ್ದೇಶನಾಲಯವು ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದೆ.

ನಟಿ ರನ್ಯಾ ರಾವ್​, ತರುಣ್ ಕೊಂಡೂರು ಮತ್ತು ಇತರರ ಗುಂಪು ಸಕ್ರಿಯವಾಗಿ ಚಿನ್ನ ಕಳ್ಳಸಾಗಾಣಿಕೆ ಮಾಡುತ್ತಿದ್ದರು. ದುಬೈ ಮತ್ತು ಉಗಾಂಡಾದ ಪೂರೈಕೆದಾರರಿಂದ ಚಿನ್ನವನ್ನು ಖರೀದಿಸಿ, ಹವಾಲಾ ಮೂಲಕ ನಗದು ಪಾವತಿ ಮಾಡುತ್ತಿದ್ದರು. ದುಬೈನಲ್ಲಿ ಚಿನ್ನಸಾಗಾಣೆ ಬಗ್ಗೆ ಸುಳ್ಳು ಕಸ್ಟಮ್ಸ್ ಡಿಕ್ಲರೇಷನ್ ಪಡೆಯುತ್ತಿದ್ದರು. ಚಿನ್ನವನ್ನು ಸ್ವಿಟ್ಜರ್ಲ್ಯಾಂಡ್, ಯುಎಸ್ಎಗೆ ತೆಗೆದುಕೊಂಡು ಹೋಗುತ್ತೇವೆಂದು ಡಿಕ್ಲರೇಷನ್ ಪಡೆಯುತ್ತಿದ್ದರು ಎಂದು ಈ.ಡಿ. ತನಿಖೆ ವೇಳೆ ತಿಳಿದುಬಂದಿರುವುದಾಗಿ ಗೊತ್ತಾಗಿದೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News