×
Ad

ಚಿನ್ನ ಕಳ್ಳಸಾಗಣೆ ಪ್ರಕರಣ | ರನ್ಯಾರಾವ್‍ಗೆ 102 ಕೋಟಿ ರೂ.ದಂಡ ಪಾವತಿಸಲು ಡಿಆರ್‌ಐ ನೋಟಿಸ್

Update: 2025-09-02 20:35 IST

 ನಟಿ ರನ್ಯಾರಾವ್‍

ಬೆಂಗಳೂರು, ಸೆ.2: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟಿ ರನ್ಯಾರಾವ್‍ಗೆ 102.55 ಕೋಟಿ ರೂ.ದಂಡ ಪಾವತಿಸುವಂತೆ ಆದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್‌ಐ)ದ ಅಧಿಕಾರಿಗಳು ಸುಮಾರು 2500 ಪುಟಗಳ ದಾಖಲೆ ಸಮೇತ ನೋಟಿಸ್ ನೀಡಿರುವುದಾಗಿ ವರದಿಯಾಗಿದೆ.

ಈ ಸಂಬಂಧ ಇತರೆ ಮೂವರು ಆರೋಪಿಗಳಿಗೂ 50 ಕೋಟಿ ರೂ.ಗೂ ಅಧಿಕ ದಂಡ ವಿಧಿಸುವಂತೆ ನೋಟಿಸ್‍ನಲ್ಲಿ ಉಲ್ಲೇಖಿಸಲಾಗಿದೆ ಎಂದು ಡಿಆರ್‌ಐ ಮೂಲಗಳು ತಿಳಿಸಿವೆ.

ಮಾರ್ಚ್ 3ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ್ದ ಹಿನ್ನೆಲೆ ನಟಿ ರನ್ಯಾರಾವ್‍ರನ್ನು ಪೊಲೀಸರು ಬಂಧಿಸಿದ್ದರು. ಈ ವೇಳೆ ಡಿಆರ್‌ಐ ಅಧಿಕಾರಿಗಳು ರನ್ಯಾರಾವ್ ಬಳಿ 14.8 ಕೆ.ಜಿ. ಚಿನ್ನವನ್ನು ವಶಪಡಿಸಿಕೊಂಡಿದ್ದರು. ಡಿಆರ್‌ಐ  ತನಿಖೆಯಲ್ಲಿ ರನ್ಯಾರಾವ್ ಸುಮಾರು 15 ದಿನಗಳಲ್ಲಿ 4 ಬಾರಿ ದುಬೈಗೆ ಹೋಗಿ ಚಿನ್ನ ಕಳ್ಳಸಾಗಣೆ ಮಾಡಿದ್ದರು ಎಂದು ಬಹಿರಂಗಗೊಂಡಿತ್ತು.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ-1974ರ ಕಾಯ್ದೆ ಅಡಿಯಲ್ಲಿ ಹೈಕೋರ್ಟ್ ಅರ್ಜಿ ವಿಚಾರಣೆ ಮಾಡಿದ್ದು, ಸೆಪ್ಟೆಂಬರ್ 11ಕ್ಕೆ ಮುಂದೂಡಿದೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News