×
Ad

ಜನಿವಾರ ತೆಗೆಯಬೇಕೆಂಬ ಯಾವುದೇ ಮಾರ್ಗಸೂಚಿಯನ್ನು ಸರ್ಕಾರ ಹೊರಡಿಸಿಲ್ಲ : ಸಚಿವ ದಿನೇಶ್ ಗುಂಡೂರಾವ್

Update: 2025-04-19 15:26 IST

ದಿನೇಶ್‌ ಗುಂಡೂರಾವ್‌

ಬೆಂಗಳೂರು : ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳು ಜನಿವಾರ ತೆಗೆಯಬೇಕು ಎಂಬ ಪರೀಕ್ಷಾ ಕೇಂದ್ರದ ಅಧಿಕಾರಿಗಳ ಅತಿರೇಖದ ವರ್ತನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಜನಿವಾರ ತೆಗೆಯಬೇಕೆಂಬ ಯಾವುದೇ ಮಾರ್ಗಸೂಚಿಯನ್ನು ಸರ್ಕಾರ ಹೊರಡಿಸಿಲ್ಲ. ಈ ಬಗ್ಗೆ ಕೆಇಎ ಅಧಿಕಾರಿಗಳು ಹಾಗು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಅವರು ಸ್ಪಷ್ಟಪಡಿಸಿದ್ದಾರೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ X ನಲ್ಲಿ ಟ್ವೀಟ್‌ ಮಾಡಿರುವ ಸಚಿವ ದಿನೇಶ್ ಗುಂಡೂರಾವ್ ಅವರು, ಇಂತಹ ಅತಿರೇಖದ ವರ್ತನೆ ತೋರಿ, ವಿದ್ಯಾರ್ಥಿಗಳಿಗೆ ಹಾಗೂ ಬ್ರಾಹ್ಮಣ ಸಮುದಾಯಕ್ಕೆ ಅಪಚಾರ ಎಸಗಿದ ಅಧಿಕಾರಿಯ ವಿರುದ್ಧ ಸರ್ಕಾರ ಶಿಸ್ತುಕ್ರಮ ಕೈಗೊಳ್ಳಲಿದೆ. ಕಾನೂನು ನಿರ್ವಹಿಸುವ ವೇಳೆ ಅಧಿಕಾರಿಗಳು ವಿವೇಚನೆಯಿಂದ ವರ್ತಿಸಬೇಕು ಮತ್ತು ಅನಗತ್ಯಗೊಂದಲಗಳಿಗೆ ಆಸ್ಪದ ಮಾಡಿಕೊಡಬಾರದು. ಕಾರ್ಯನಿರ್ವಹಣೆಯಲ್ಲಿ ಯಾವುದೇ ಗೊಂದಲಗಳಿದ್ದರೆ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಬೇಕೇ ವಿನಃ ಮನಸೋ ಇಚ್ಛೆ ವರ್ತಿಸಿ ಸಮಾಜದ ಸ್ವಾಸ್ತ್ಯ ಕೆಡಿಸಿದರೆ ಅದಕ್ಕೆ ತಕ್ಕ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News