ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆಗೆ ಸರಕಾರದ ಆದೇಶ
Update: 2026-06-04 23:00 IST
ಸಾಂದರ್ಭಿಕ ಚಿತ್ರ | PC : Gemini AI
ಬೆಂಗಳೂರು : ರಾಜ್ಯದಲ್ಲಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಸಂಬಂಧ ರಾಜ್ಯ ಸರಕಾರ ಅಧಿಕೃತ ಆದೇಶ ಹೊರಡಿಸಿದೆ.
ಗುರುವಾರ ಈ ಸಂಬಂಧ ಸಾರಿಗೆ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಪುಷ್ಪಾ ವಿ.ಎಸ್. ಅವರು ಆದೇಶ ಹೊರಡಿಸಿದ್ದು, ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ನಿಗಮಗಳಿಗೆ ಅರ್ಜಿ ಸಲ್ಲಿಸಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಉಚಿತ ಬಸ್‍ಪಾಸ್ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಲಾಗಿದೆ.
ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನಡೆದ ಮೊದಲ ಸಂಪುಟ ಸಭೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡಲಾಗುವುದು ಎಂದು ತೀರ್ಮಾನ ಕೈಗೊಂಡಿದ್ದರು. ಇದೀಗ ಸರಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ.