ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ | ದುರಂತದ ಹೊಣೆಯನ್ನು ರಾಜ್ಯ ಸರಕಾರವೇ ಹೊರಬೇಕು: ಎಚ್.ಡಿ. ಕುಮಾರಸ್ವಾಮಿ
ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಬುಧವಾರ ಈ ಸಂಬಂಧ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ. ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರಕಾರವೇ ಹೊತ್ತುಕೊಳ್ಳಬೇಕು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರಕಾರ ಕೂಡಲೇ ಧಾವಿಸಬೇಕು ಎಂದು ಹೇಳಿದ್ದಾರೆ.
ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 4, 2025
ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ.
ಸರಿಯಾದ…