×
Ad

ಅಂಬಿಕಾಪತಿ ಸಾವು ಸಹಜವಲ್ಲವೆಂದ ಕೆಂಪಣ್ಣ ಹೇಳಿಕೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಲಿ: ಯತ್ನಾಳ್

Update: 2023-11-30 22:49 IST

ಬೆಂಗಳೂರು: ಗುತ್ತಿಗೆದಾರ ಅಂಬಿಕಾಪತಿ ಸಾವು ಸಹಜವಲ್ಲವೆಂದಿರುವ ಕೆಂಪಣ್ಣನವರ ಹೇಳಿಕೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಒತ್ತಾಯಿಸಿದ್ದಾರೆ.

ಗುರುವಾರ ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಬರೆದುಕೊಂಡಿರುವ ಅವರು, ಆದಾಯ ತೆರಿಗೆ ದಾಳಿಯ ವೇಳೆ ಅಂಬಿಕಾಪತಿ ಮನೆಯಲ್ಲಿ 40 ಕೋಟಿ ರೂ. ಸಿಕ್ಕಿತ್ತು. ಈ ಹಣ ಸರಕಾರದ ಪ್ರಭಾವಿ ಮಂತ್ರಿ ಹಾಗು ಒಬ್ಬ ಪ್ರಭಾವಿ ರಾಜಕಾರಣಿಯ ಮಗನಿಗೆ ಸೇರಿದ್ದು ಎಂಬ ಸುದ್ದಿಯೂ ಇದೆ. ಇದಕ್ಕೆ ಸಾಕ್ಷಿಯಾಗಿ ಆ ಪ್ರಭಾವಿ ರಾಜಕಾರಣಿ ಮಗನ ಆಪ್ತ ಸಹಾಯಕನನ್ನು ಆದಾಯ ತೆರಿಗೆ ಇಲಾಖೆ ವಿಚಾರಣೆಗೆ ಒಳಪಡಿಸಿತ್ತು ಎಂದಿದ್ದಾರೆ.

ಆದಾಯ ತೆರಿಗೆ ಇಲಾಖೆಗೆ ಪ್ರಕರಣದ ಕುರಿತು ಹೇಳಿಕೆ ನೀಡಿದ್ದ ಅಂಬಿಕಾಪತಿ ಯಾರ ಹೆಸರುಗಳನ್ನೂ ಹೇಳಿದ್ದಾರೋ, ಆ ಹಣ ಯಾರದ್ದು ಎಂದು ಹೇಳಿದ್ದರೋ ಎಂಬ ಅಂಶವು ತನಿಖೆಯಲ್ಲಿ ಬಯಲಾಗಬೇಕಿದೆ. ಅಂಬಿಕಾಪತಿಯ ಸಾವಿನ ಬಗ್ಗೆಯೂ ಕೂಲಂಕುಷವಾಗಿ ತನಿಖೆಯಾಗಬೇಕು ಎಂದು ಅವರ ಆಗ್ರಹಿಸಿದ್ದಾರೆ.

ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷರಾಗಿದ್ದ ಅಂಬಿಕಾಪತಿ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ನ.27 ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು. ಅಕ್ಟೋಬರ್ ನಲ್ಲಿ ಅಂಬಿಕಾಪತಿ ನಿವಾಸಕ್ಕೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಐಟಿ ರೇಡ್ ವೇಳೆ ಅಂಬಿಕಾಪತಿ ಮನೆಯಲ್ಲಿ ಬರೋಬ್ಬರಿ 44 ಕೊಟಿ ರೂ. ಪತ್ತೆಯಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News