×
Ad

ಸರಕಾರ ರಚಿಸಲು ಡಿ.ಕೆ.ಶಿವಕುಮಾರ್‌ಗೆ ರಾಜ್ಯಪಾಲರ ಆಹ್ವಾನ: ಜೂ.3 ರಂದು ಪ್ರಮಾಣವಚನ ಸ್ವೀಕಾರ

Update: 2026-05-30 19:33 IST

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ.

ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್ ಹೆಸರನ್ನು ಅಧಿಕೃತವಾಗಿ ಘೋಷಿಸಿದರು. ಇದರ ಬೆನ್ನಲ್ಲೇ ಸಿಎಲ್ ಪಿ ನಾಯಕ ಡಿ.ಕೆ.ಶಿವಕುಮಾರ್ ಅವರು ಲೋಕಭವನಕ್ಕೆ ತೆರಳಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದೆ ಸರಕಾರ ರಚನೆಗೆ ಹಕ್ಕು ಮಂಡಿಸಿದರು. ಇದೀಗ ರಾಜ್ಯಪಾಲರು ಅವರಿಗೆ ನೂತನ ಸರಕಾರ ರಚಿಸಲು ಆಹ್ವಾನ ನೀಡಿದ್ದಾರೆ.

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಜೂನ್‌ 3ರಂದು ಸಂಜೆ 4.05ಕ್ಕೆ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News