19 ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ; ಎರಡು ವಾಪಸ್
Update: 2026-01-09 19:08 IST
ಥಾವರ್‌ಚಂದ್ ಗೆಹ್ಲೋಟ್ PC : PTI
ಬೆಂಗಳೂರು : ಬೆಳಗಾವಿಯಲ್ಲಿ ನಡೆದ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಅಂಗೀಕರಿಸಲಾಗಿದ್ದ 22 ವಿಧೇಯಕಗಳ ಪೈಕಿ 19 ವಿಧೇಯಕಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗುರುವಾರ ರಾತ್ರಿ ಅಂಕಿತ ಹಾಕಿದ್ದಾರೆ.
ಕರ್ನಾಟಕ ಪರಿಶಿಷ್ಟ ಜಾತಿ(ಉಪ ವರ್ಗೀಕರಣ) ವಿಧೇಯಕ ಹಾಗೂ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮತ್ತು ಇತರ ಕಾನೂನುಗಳು(ತಿದ್ದುಪಡಿ) ವಿಧೇಯಕವನ್ನು ರಾಜ್ಯಪಾಲರು ಸರಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ(ತಡೆಗಟ್ಟುವಿಕೆ) ವಿಧೇಯಕ ರಾಜ್ಯಪಾಲರ ಪರಿಶೀಲನೆಯಲ್ಲಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭು ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.