×
Ad

ಸಂಚಾರ ನಿಯಮ ಉಲ್ಲಂಘನೆ ದಂಡದ ಬಾಕಿ ಮೊತ್ತ ಪಾವತಿಗೆ ಶೇ.50 ರಷ್ಟು ರಿಯಾಯಿತಿ

Update: 2025-08-21 21:45 IST

ಸಾಂದರ್ಭಿಕ ಚಿತ್ರ (PTI)

ಬೆಂಗಳೂರು: ರಾಜ್ಯ ಸರಕಾರವು ವಾಹನಗಳ ಸಂಚಾರ ನಿಯಮ ಉಲ್ಲಂಘನೆ ದಂಡದ ಬಾಕಿ ಮೊತ್ತ ಪಾವತಿಗೆ ಶೇ.50 ರಷ್ಟು ರಿಯಾಯಿತಿ ನೀಡಿದೆ.

ಈ ಸಂಬಂಧ ಗುರುವಾರ ಆದೇಶ ಹೊರಡಿಸಿದ್ದು, ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‍ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲಾಗಿದೆ. ರಿಯಾಯಿತಿಯು ಆ.23ರಿಂದ ಸೆ.12ರ ವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News