ಕೃಷಿ ಇಲಾಖೆಯ 945 ಅಧಿಕಾರಿಗಳ ನೇಮಕಾತಿ ಅಧಿಸೂಚನೆ ಹಿಂಪಡೆಯಲು ನಿರ್ದೇಶನ

Update: 2026-08-07 00:14 IST

ಬೆಂಗಳೂರು: ಕೃಷಿ ಇಲಾಖೆಯಲ್ಲಿ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಹೊರಡಿಸಲಾಗಿದ್ದ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ತಕ್ಷಣವೇ ಹಿಂಪಡೆಯುವಂತೆ ಕೃಷಿ ಆಯುಕ್ತರ ಕಚೇರಿಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ.

ಈ ಕುರಿತು ಕೃಷಿ ಇಲಾಖೆಯ ಆಯುಕ್ತರು ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕರಿಗೆ ಪತ್ರ ಬರೆದಿದ್ದು, ಕೃಷಿ ಇಲಾಖೆಯಲ್ಲಿದ್ದ 128 ಕೃಷಿ ಅಧಿಕಾರಿ ಹಾಗೂ 817 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳು ಸೇರಿದಂತೆ ಒಟ್ಟು 945 ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರಿಷ್ಕೃತ ನೇಮಕಾತಿ ಅಧಿಸೂಚನೆ ಹೊರಡಿಸಿತ್ತು. ಆದರೆ, ಸರಕಾರದ ಸೂಚನೆಯಂತೆ ಈ ಅಧಿಸೂಚನೆಗಳನ್ನು ಕೂಡಲೇ ಹಿಂಪಡೆಯುವಂತೆ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News