×
Ad

ವಿಪಕ್ಷ ಯಾವುದೇ ವಿಚಾರ ಎತ್ತಿದರೂ ಉತ್ತರ ಕೊಡಲು ಸರಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ

Update: 2023-12-11 16:30 IST

ಬೆಳಗಾವಿ: ‘ವಿರೋಧ ಪಕ್ಷಗಳು ಯಾವುದೇ ವಿಚಾರ ಎತ್ತಿದರೂ ಉತ್ತರ ಕೊಡಲು ಸರಕಾರ ಸಿದ್ಧವಿದೆ. ಯಾವುದನ್ನೂ ವಿಳಂಬ ಅಥವಾ ಕಾಲಹರಣ ಮಾಡುವುದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸೋಮವಾರ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯೊಳಗೆ ಎಂದಿಗೂ ಸಮನ್ವಯ ಇಲ್ಲವೇ ಇಲ್ಲ. ಅವರಲ್ಲಿ ಎರಡು ಗುಂಪುಗಳಿವೆ. ಅವರು ಆಪರೇಷನ್ ಕಮಲದ ಮುಖಾಂತರ ಅಧಿಕಾರಕ್ಕೆ ಬಂದಿದ್ದಾರೆ. ನಂತರ ಜನ ಅವರನ್ನು ತಿರಸ್ಕರಿಸಿದ್ದಾರೆ ಎಂದರು.

ತಪ್ಪಿತಸ್ಥರ ವಿರುದ್ಧ ಕ್ರಮ: ಬೆಳಗಾವಿಯಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯವೆಸಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಪಂಚಮಸಾಲಿ ನಾಯಕರು ಹಾಗೂ ಸ್ವಾಮೀಜಿಗಳೊಂದಿಗೆ ಡಿ.13ಕ್ಕೆ ಅಧಿವೇಶನ ಮುಗಿದ ನಂತರ ಚರ್ಚೆ ನಡೆಸುವುದಾಗಿ ತಿಳಿಸಿದ್ದೇನೆ ಎಂದು ಹೇಳಿದರು.

ಸ್ಪೀಕರ್ ಸಂಬಂಧಿಸಿದ್ದು: ಸುವರ್ಣ ವಿಧಾನಸೌಧದಲ್ಲಿರುವ ಸಾವರ್ಕರ್ ಪೊಟೋ ತೆಗೆಯುವ ಬಗ್ಗೆ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಈ ವಿಚಾರ ಸಭಾಧ್ಯಕ್ಷರಿಗೆ ಸಂಬಂಧಿಸಿದ್ದು ಎಂದರು.

ಬಿಜೆಪಿ-ಜೆಡಿಎಸ್ ಭ್ರಮೆ: ಸರಕಾರ ಪತನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿ ಮತ್ತು ಜೆಡಿಎಸ್ ನೀರಿನಿಂದ ತೆಗೆದ ಮೀನಿನಂತೆ ವಿಲಿ ವಿಲಿ ಎಂದು ಒದ್ದಾಡುತ್ತಿದೆ, ಭ್ರಮಾಲೋಕದಲ್ಲಿದ್ದಾರೆ’ ಎಂದು ಲೇವಡಿ ಮಾಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News