×
Ad

ವಿರೋಧ ಪಕ್ಷ ಸದಸ್ಯರ ಕ್ಷೇತ್ರದ ಅಭಿವೃದ್ಧಿಗೆ ತಲಾ 25 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿದ ಸರಕಾರ

Update: 2025-09-16 18:35 IST

 ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ಸದಸ್ಯರ ಕ್ಷೇತ್ರದ ಅಭಿವೃದ್ಧಿಗೆ ತಲಾ 25 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಲು ರಾಜ್ಯ ಸರಕಾರ ಮುಂದಾಗಿದೆ.

ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಹಣ ಬಿಡುಗಡೆ ಮಾಡಲಾಗುತ್ತಿದ್ದು, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಅಡಿ ಬರುವ ರಸ್ತೆ, ಸೇತುವೆ ಹಾಗೂ ನಗರಾಭಿವೃದ್ಧಿ ಇಲಾಖೆ ವ್ಯಾಪ್ತಿಯ ನಗರ ಪ್ರದೇಶ ಕಾಮಗಾರಿಗಳಿಗೆ 18.75 ಕೋಟಿ ರೂ. ಬಿಡುಗಡೆ.

ಅದೇ ರೀತಿ, ವಿವೇಚನಾಧಿಕಾರದಡಿ ವಿಧಾನಸಭೆ ಸದಸ್ಯರು ಆಯ್ಕೆ ಮಾಡಬಹುದಾದ ಇತರ ಇಲಾಖೆ ಕಾಮಗಾರಿಗಳಿಗೆ 6.25 ಕೋಟಿ ರೂ. ಬಿಡುಗಡೆ ಸೇರಿ ಒಟ್ಟು 25 ಕೋಟಿ ರೂ. ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿರು ನಿಶಾನೆ ತೋರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News