×
Ad

ಗ್ರಾಮ ಪಂಚಾಯಿತಿ ಚುನಾವಣೆ ವೇಳಾಪಟ್ಟಿ ಪ್ರಕಟಿಸಿಲ್ಲ: ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ

Update: 2025-09-01 20:43 IST

ಸಾಂದರ್ಭಿಕ ಚಿತ್ರ (PTI)

ಬೆಂಗಳೂರು, ಸೆ.1: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಸಂಬಂಧಿಸಿದಂತೆ ವೇಳಾಪಟ್ಟಿಯು ಪ್ರಕಟಗೊಂಡಿಲ್ಲ ಎಂದು ರಾಜ್ಯ ಚುನಾವಣಾ ಆಯೋಗವು ಸ್ಪಷ್ಟಪಡಿಸಿದೆ.

ಸೋಮವಾರ ಆಯೋಗವು ಪ್ರಕಟನೆ ಹೊರಡಿಸಿದ್ದು, ವೇಳಾಪಟ್ಟಿ ಪ್ರಕಟಗೊಂಡಿರುವ ಬಗ್ಗೆ ಸುಳ್ಳು ಮಾಹಿತಿಯು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಆಯೋಗದ ಗಮನಕ್ಕೆ ಬಂದಿರುತ್ತದೆ. ಆದರೆ ಅದು ಸುಳ್ಳು ಮಾಹಿತಿ ಎಂದು ತಿಳಿಸಿದೆ.

ಆಯೋಗವು ಪತ್ರಿಕಾ ಹಾಗೂ ದೃಶ್ಯ ಮಾಧ್ಯಮದ ಮೂಲಕ ಸುದ್ದಿಗೋಷ್ಠಿಯನ್ನು ಕರೆದು ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಘೋಷಿಸುತ್ತದೆ. ಅದುದರಿಂದ, ಪ್ರಸ್ತುತ ಹರಿದಾಡುತ್ತಿರುವ ಚುನಾವಣಾ ವೇಳಾಪಟ್ಟಿಯು ಸುಳ್ಳು ಮಾಹಿತಿಯಾಗಿದ್ದು, ಸಾರ್ವಜನಿಕರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News