×
Ad

ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ 6500 ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಹಸಿರು ನಿಶಾನೆ

Update: 2023-10-21 22:29 IST

ಬೆಂಗಳೂರು, ಅ.21: ಸಾರಿಗೆ ಸಂಸ್ಥೆಗಳಲ್ಲಿ ಕಳೆದ 8 ವರ್ಷಗಳಿಂದ ಅಂದರೆ 2016ರಲ್ಲಿನ ನೇಮಕಾತಿ ನಂತರ ಯಾವುದೇ ನೇಮಕಾತಿ ಆಗಿರಲಿಲ್ಲ. ಈ ಸಂಬಂಧ 4 ಸಾರಿಗೆ ಸಂಸ್ಥೆಗಳಲ್ಲಿ 2016 ರಿಂದ ಇಲ್ಲಿಯವರೆಗೆ ಸಿಬ್ಬಂದಿಗಳ ನಿವೃತ್ತಿ ಹಾಗೂ ಇತರೆ ಕಾರಣಗಳಿಂದ 13669 ಖಾಲಿ ಹುದ್ದೆಗಳಿದ್ದವು.

ಈ ಬಗ್ಗೆ 13000 ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಸಾರಿಗೆ ಸಂಸ್ಥೆಗಳಿಗೆ ಅನುಮತಿ ನೀಡುವಂತೆ ಸರಕಾರವನ್ನು ಕೋರಲಾಗಿತ್ತು.

ಅದರಂತೆ ಮೊದಲನೆ ಹಂತದಲ್ಲಿ 6500 ಚಾಲನಾ ಸಿಬ್ಬಂದಿಗಳಿಗೆ ಹಾಗೂ 300 ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಸರಕಾರದಿಂದ ಅನುಮತಿ ದೊರಕಿದೆ.

ಸಂಸ್ಥೆವಾರು ನೇಮಕಾತಿ ವಿವರ ಈ ಕೆಳಕಂಡಂತಿದೆ.

ಕೆಎಸ್ಸಾರ್ಟಿಸಿ: ಡ್ರೈವರ್ ಕಮ್ ಕಂಡಕ್ಟರ್: 2000., ತಾಂತ್ರಿಕ ಸಿಬ್ಬಂದಿ: 300

ಎನ್‍ಡಬ್ಲ್ಯೂಕೆಆರ್‍ಟಿಸಿ: ಡ್ರೈವರ್ ಕಮ್ ಕಂಡಕ್ಟರ್ 2000

ಬಿಎಂಟಿಸಿ: ಕಂಡಕ್ಟರ್ 2500

ಕೆಕೆಆರ್‍ಟಿಸಿ ಅಲ್ಲಿ ಈಗಾಗಲೇ 1619 ಚಾಲನಾ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಚಾಲನಾ ಪರೀಕ್ಷೆ ನಡೆಯುತ್ತಿದ್ದು, ಜನವರಿ 2024ರ ಕೊನೆಯಲ್ಲಿ ಅಂತಿಮ ಆಯ್ಕೆಪಟ್ಟಿ ಬಿಡುಗಡೆಗೊಳಿಸಲಾಗುವುದು. ಹಾಗೂ ಕೆಕೆಆರ್‍ಟಿಸಿಯಲ್ಲಿ 300 ಕಂಡಕ್ಟರ್ ಗಳ ನೇಮಕಾತಿಗೆ ಅನುಮತಿ ದೊರಕಿದ್ದು, ಅಧಿಸೂಚನೆ ಹೊರಡಿಸುವ ಹಂತದಲ್ಲಿದೆ. ಒಟ್ಟಾರೆ 8719 ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಚಾಲನೆ ದೊರಕಿದೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News