×
Ad

ಗೃಹ ಜ್ಯೋತಿ ಯೋಜನೆಗೆ ಇಂದು ಅಧಿಕೃತ ಚಾಲನೆ

Update: 2023-08-05 09:15 IST

ಬೆಂಗಳೂರು: ಕಾಂಗ್ರೆಸ್ ನ ಐದು ಗ್ಯಾರಂಟಿಗಳಲ್ಲೊಂದಾದ ಗೃಹ ಜ್ಯೋತಿ ಗೆ ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.

ಕಲಬುರಗಿಯ ಎನ್ ವಿ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಇಂಧನ ಸಚಿವ ಕೆ ಜೆ ಜಾರ್ಜ್ ಸಹಿತ ಹಲವು ಸಚಿವರು, ರಾಜಕೀಯ ಗಣ್ಯರು ಭಾಗವಹಿಸಲಿದ್ದಾರೆ.

ಈ ಯೋಜನೆಗೆ ಈಗಾಗಲೇ 1.42ಕೋಟಿಗೂ ಅಧಿಕ ಕುಟುಂಬಗಳು ನೋಂದಾವಣೆಯಾಗಿದ್ದು, ಅರ್ಜಿ ಸಲ್ಲಿಕೆಗೆ ಯಾವುದೇ ಗಡುವು ಇಲ್ಲ ಎಂದು ಸರಕಾರಿ ಮೂಲಗಳು ತಿಳಿಸಿವೆ.



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News