×
Ad

ವಾರದೊಳಗೆ ʼಗೃಹಲಕ್ಷ್ಮೀ ಅದಾಲತ್ʼ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Update: 2023-11-23 19:22 IST

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಗೆ ಉಂಟಾಗಿರುವ ಸಣ್ಣಪುಟ್ಟ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಸಿಗಲಿದ್ದು, ಇದಕ್ಕಾಗಿ ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಅದಾಲತ್ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 1 ಕೋಟಿ 10 ಲಕ್ಷ ಮಹಿಳೆಯರಿಗೆ ಈ ಯೋಜನೆ ತಲುಪಿದ್ದು, ಪಂಚಾಯಿತಿ ಅಧಿಕಾರಿ, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಬಾಕಿ ಉಳಿದಿರುವ ಫಲಾನುಭವಿಗಳಿಗೆ ಆಯಾ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಸಭೆ ನಡೆಸಿ ಹಣ ಹಾಕುವ ವ್ಯವಸ್ಥೆ ಮಾಡಲಾಗುವುದು ಎಂದರು.

ಈಗಾಗಲೇ ಮೂರು ಕಂತಿನ ದುಡ್ಡು ಬಾರದೇ ಇದ್ದವರಿಗೆ ಏಕಕಾಲಕ್ಕೆ ಆರು ಸಾವಿರ ದುಡ್ಡು ಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎಂದರು. ಗೃಹ ಲಕ್ಷ್ಮೀ ಯೋಜನೆಗೆ ಸುಮಾರು 50 ಸಾವಿರ ತೆರಿಗೆದಾರರು ಕೂಡ ಅರ್ಜಿ ಹಾಕಿದ್ದು, ಅರ್ಜಿಗಳನ್ನು ನಿರಾಕರಿಸಿ ರದ್ದು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News