×
Ad

ಹಾನಗಲ್‌ ಅತ್ಯಾಚಾರ ಪ್ರಕರಣ; ಇನ್ನಿಬ್ಬರು ಆರೋಪಿಗಳ ಬಂಧನ

Update: 2024-01-15 11:44 IST

ಹಾವೇರಿ: ಹಾನಗಲ್‌ ನಲ್ಲಿ ನಡೆದ  ಅತ್ಯಾಚಾರ ಪ್ರಕರಣದ ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಒಟ್ಟು ಎಂಟು ಆರೋಪಿಗಳ ಬಂಧನವಾಗಿದೆ.

ಬಂಧಿತ ಆರೋಪಿಗಳನ್ನು ಅಕ್ಕಿಆಲೂರಿನ ಸಂತೆ ವ್ಯಾಪಾರಿ ಸಾದಿಕ್ ಬಾಬುಸಾಬ್ ಅಗಸಿಮನಿ (29) ಮತ್ತು  ಶೋಯೆಬ್ ಮುಲ್ಲಾ (19) ಎಂದು ಗುರುತಿಸಲಾಗಿದೆ.

ಸೋಮವಾರ ಹಾವೇರಿ ಜಿಲ್ಲೆಗೆ ಸಿಎಂ ಆಗಮನದ ಹಿನ್ನೆಲೆಯಲ್ಲಿ  ಅಲರ್ಟ್ ಆದ ಪೊಲೀಸರು, ರವಿವಾರ ಆರೋಪಿಗಳಾದ ಅಕ್ಕಿಆಲೂರಿನ ಇಮ್ರಾನ್‌ ಬಶೀರ್ ಜೇಕಿನಕಟ್ಟಿ (23) ರೆಹಾನ್‌ ಹುಸೇನ್ (19) ಎಂಬವರನ್ನು ಆರೋಪಿಗಳನ್ನು ಬಂಧಿಸಿದ್ದರು.

 ಪ್ರಕರಣ ದಾಖಲಾದ ಬೆನ್ನಲ್ಲೇ ಅಕ್ಕಿಆಲೂರಿನ ಅಫ್ತಾಬ್‌ ಚಂದನಕಟ್ಟಿ, ಮದರಸಾಬ್‌ ಮಂಡಕ್ಕಿ ಹಾಗೂ ಅಬ್ದುಲ್ಲಾ ಖಾದರ್‌, ಜಾಫರ್ ಸಾಬ್‌ ಹಂಚಿನಮನಿ ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು.

ಇನ್ನೊಬ್ಬ ಆರೋಪಿ ಮುಹಮದ್ ಸೈಫ್‌ ಎಂಬಾತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,  ಚಿಕಿತ್ಸೆ ಪೂರ್ಣಗೊಂಡ ಬಳಿಕ ಬಂಧಿಸಲಾಗುವುದು ಎಂದು ಎಸ್ಪಿ ಅಂಶುಕುಮಾರ್ ತಿಳಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News