ಹನೂರು ಶೂಟೌಟ್ ಪ್ರಕರಣ: ಆ.21ಕ್ಕೆ ವರದಿ ಸಲ್ಲಿಕೆ : ರಾಮಲಿಂಗಾರೆಡ್ಡಿ
ಬೆಂಗಳೂರು : ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ಪ್ರದೇಶದಲ್ಲಿ ಶೂಟೌಟ್ ಪ್ರಕರಣ ಸಂಬಂಧ ಮ್ಯಾಜಿಸ್ಟ್ರೇಟ್ ತನಿಖೆ ನಡೆಯುತ್ತಿದ್ದು, ಆ.21ಕ್ಕೆ ಆ ವರದಿ ಸಲ್ಲಿಕೆಯಾಗುವ ಸಾಧ್ಯತೆಗಳಿವೆ ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮ್ಯಾಜಿಸ್ಟ್ರೇಟ್ ತನಿಖೆ ಸಂಬಂಧ ವಿಧಾನಮಂಡಲದ ಉಭಯ ಸದನಗಳಲ್ಲೂ ಹೇಳಿಕೆ ನೀಡಲಾಗಿದೆ. ಒಂದು ವೇಳೆ ಎನ್‍ಕೌಂಟರ್‍ಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳ ತಪ್ಪಿದ್ದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಸತ್ಯಾಸತ್ಯತೆ ವರದಿ ಬಂದ ನಂತರ ಗೊತ್ತಾಗಲಿದೆ ಎಂದರು.
ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಪ್ರತಿಕ್ರಿಯೆ ನೀಡಿದ್ದಾರೆ. ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರದ ವೇಳೆ 41 ಮಂದಿ ಮೃತಪಟ್ಟಿದ್ದರು. ನಮಲ್ಲಿನ ಸಮಸ್ಯೆ ಬಗ್ಗೆ ಅವರು ಏಕೆ ಪ್ರತಿಕ್ರಿಯಿಸುತ್ತಾರೆ. ಅಲ್ಲದೆ, ಈ ಹಿಂದಿನ ಬಿಜೆಪಿ ಸರಕಾರದಲ್ಲೂ ಬೇಟೆಗಾರರ ಮೇಲೆ ದಾಳಿ ಮಾಡಿರುವ ನಿದರ್ಶನಗಳಲಿದ್ದು, ಇದೇನು ಮೊದಲಲ್ಲ ಎಂದು ಅವರು ತಿಳಿಸಿದರು.