×
Ad

ಹನೂರು | ರಸ್ತೆ ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ: ನೋವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Update: 2023-12-02 09:51 IST

ಹನೂರು, ಡಿ.2: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಹನೂರಿನ ಯುವಕನೋರ್ವನ ಅಂಗಾಂಗ ದಾನ ಮಾಡುವ ಮೂಲಕ ಆತನ ಹೆತ್ತವರು ನೋವಿನಲ್ಲೂ ಸಾರ್ಥಕತೆ ಮೆರೆದು ಮಾದರಿಯಾಗಿದ್ದಾರೆ.

ಹನೂರು ಪಟ್ಟಣದ ನಿವಾಸಿಗಳಾದ ಶಶಿ ಮತ್ತು ಸುಶೀಲಾ ದಂಪತಿಯ ಪುತ್ರ ದರ್ಶನ್ ರಸ್ತೆ ಅಪಘಾತವಾದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಈ ಹಿನ್ನಲೆಯಲ್ಲಿ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ತಲೆಗೆ ತೀವ್ರತರದ ಗಾಯಗಳಾಗಿದ್ದರಿಂದ ದರ್ಶನ್ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ಅಲ್ಲಿನ ವೈದ್ಯರು ಘೋಷಿಸಿದರು. ಈ ಶೋಕದಲ್ಲೂ ದರ್ಶನ್ ಪೋಷಕರು ತಮ್ಮ ಪುತ್ರನ ಅಂಗಾಂಗ ದಾನ ಮಾಡಲು ಒಪ್ಪಿಗೆ ಸೂಚಿಸಿ ಮಾನವೀಯತೆ ಮೆರೆದಿದ್ದಾರೆ.

ಅದರಂತೆ ಕಾರ್ಯಪ್ರವೃತ್ತರಾದ ವೈದ್ಯರು ಮೈಸೂರಿನ ಅಪೋಲೋ ಆಸ್ಪತ್ರೆಗೆ ದರ್ಶನ್ ಹೃದಯ ಮತ್ತು ಹೃದಯದ ನಾಳ, ಶ್ವಾಸಕೋಸ ನಾಶಗಳು, ಪಿತ್ತಕೋಶ(ಲಿವರ್), ಮೂತ್ರಪಿಂಡ(ಕಿಡ್ನಿ), ಕಣ್ಣುಗಳನ್ನು ರವಾನಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News