×
Ad

ಹಾಸನ: ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಿಢೀರ್ ದಾಳಿ; 17 ಮೊಬೈಲ್, ಗಾಂಜಾ ವಶ

Update: 2023-08-19 15:29 IST

ಹಾಸನ: ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ತಡರಾತ್ರಿ ದಿಢೀರ್ ದಾಳಿ ನಡೆಸಿ 17 ಮೊಬೈಲ್, ಗಾಂಜಾ, ಬಿಡಿ ಹಾಗೂ ಸಿಗರೇಟ್ ಅನ್ನು ವಶಪಡಿಸಿಕೊಂಡಿದ್ದಾರೆ.

ಹಾಸನ ನಗರದ ಸಂತೆ ಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹದ ಮೇಲೆ ಎಸ್ಪಿ ಹರಿರಾಂ ಶಂಕರ್, ಹೆಚ್ಚುವರಿ ಎಸ್ಪಿ ತಮ್ಮಯ್ಯ ಹಾಗೂ ಇನ್ಸ್ ಪೆಕ್ಟರ್ ರೇವಣ್ಣ ನೇತೃತ್ವದಲ್ಲಿ 60 ಪೊಲೀಸ್ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಮುಂಜಾನೆಯವರೆಗೂ ಜೈಲಿನ ಕೊಠಡಿಗಳಲ್ಲಿ ಶೋಧಕಾರ್ಯ ನಡೆಸಿದ್ದಾರೆ.

ಈ ವೇಳೆ ಜೈಲಿನಲ್ಲಿರುವ ಆರೋಪಿಗಳು ಹಾಗೂ ಖೈದಿಗಳ ಬಳಿ ಮೊಬೈಲ್ ಫೋನ್ ಗಳು ಹಾಗೂ ಗಾಂಜಾ ಪತ್ತೆಯಾಗಿದೆ.  ಜೈಲಿನೊಳಗೆ ಮೊಬೈಲ್, ಗಾಂಜಾ ಪೂರೈಕೆ ಮಾಡುತ್ತಿರುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News