×
Ad

ಹಾವೇರಿ ಅನೈತಿಕ ಪೊಲೀಸ್‌ ಗಿರಿ ಪ್ರಕರಣ: ಘಟನಾ ಸ್ಥಳಕ್ಕೆ ಐಜಿಪಿ ತ್ಯಾಗರಾಜನ್ ಭೇಟಿ

Update: 2024-01-13 23:30 IST

ಹಾವೇರಿ: ಹಾನಗಲ್ ತಾಲೂಕಿನ ನಾಲ್ಕರ್‌ ಕ್ರಾಸ್‌ ಸಮೀಪದ ಖಾಸಗಿ ಹೋಟೆಲ್‌ನಲ್ಲಿ ನಡೆದಿದ್ದ ಮಹಿಳೆ ಮತ್ತು ಪುರುಷನ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಮಹಿಳೆಯ ಹೇಳಿಕೆ ಆಧರಿಸಿ ಪೊಲೀಸರು ‘ಸಾಮೂಹಿಕ ಅತ್ಯಾಚಾರ’ದ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೂರ್ವವಲಯದ IGP ತ್ಯಾಗರಾಜನ್ ಭೇಟಿ ನೀಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದರು. 

ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನುಳಿದ 3 ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಹಾವೇರಿ ಜಿಲ್ಲೆಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಘಟನೆ ಬಗ್ಗೆ ಮಾಹಿತಿ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News