×
Ad

ಹಾವೇರಿ: ಶಾಲಾ ವಿದ್ಯಾರ್ಥಿಗಳು ಪ್ರವಾಸ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಚಾಲಕ ಸಹಿತ ನಾಲ್ವರು ಗಂಭೀರ

Update: 2023-12-26 10:27 IST

ಹಾವೇರಿ: ಶಾಲಾ ವಿದ್ಯಾರ್ಥಿಗಳು ಪ್ರವಾಸಕ್ಕೆ ಹೊರಟಿದ್ದ ಕೆಎಸ್ಸಾರ್ಟಿಸಿ  ಬಸ್ ಪಲ್ಟಿಯಾಗಿ ಬಸ್ ಚಾಲಕ ಸಹಿತ ಮೂವರು ವಿಧ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಸವಣೂರು ತಾಲೂಕಿನ ಬೇವಿನಹಳ್ಳಿ ಕ್ರಾಸ್ ಬಳಿ ನಡೆದಿದೆ.  

ರಾಯಚೂರು ಜಿಲ್ಲೆ ಲಿಂಗಸೂರ ತಾ. ಸಜ್ಜಲಗುಡ್ಡದ ಹಿರಿಯ ಪ್ರಾರ್ಥಮಿಕ ಶಾಲೆಯ 53 ವಿದ್ಯಾರ್ಥಿಗಳು ಮತ್ತು 6 ಜನ ಶಿಕ್ಷಕರು ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಸರ್ಕಾರಿ ಬಸ್ ನಲ್ಲಿ ಶಿಗ್ಗಾಂವಿ ತಾಲೂಕಿನ ಗೊಟಗೋಡಿ ರಾಕ್ ಗಾರ್ಡನ್ ವೀಕ್ಷಿಸಲು ಹೊರಟಿದ್ದರು. ಈ ವೇಳೆ ಬೇವಿನಹಳ್ಳಿ ಕ್ರಾಸ್ ಬಳಿ ಎದುರಿಗೆ ವೇಗವಾಗಿ ಬಂದ ಕಾರನ್ನು ತಪ್ಪಿಸಲು ಯತ್ನಿಸಿದಾಗ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ.

ಬೆನ್ನು ಮೂಳೆ ಮುರಿತಕ್ಕೊಳಗಾದ ಡ್ರೈವರ್ ಮಲಪ್ಪ ಹೊಸೂರು ಮತ್ತು ಗಂಭೀರ ಗಾಯಗೊಂಡ  ವಿದ್ಯಾರ್ಥಿಗಳಾದ ವಿವ್ಯಾ ಸಜ್ಜಲಗುಡ್ಡ, ಸವಿತಾ ರವಿ ರೆಡ್ಡಿ, ಗುರು ಗೌಡ ಎಂಬವರನ್ನು ಹುಬ್ಬಳ್ಳಿ ಕಿಮ್ಸ್ ಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಸಣ್ಣಪಟ್ಟ ಗಾಯಗಳಾದ ವಿದ್ಯಾರ್ಥಿಗಳನ್ನು ಸವಣೂರು ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.



 




Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News