×
Ad

ನಿವೃತ್ತ ಶಿಕ್ಷಕರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಹಾವೇರಿ DDPI

Update: 2023-07-21 23:56 IST

ಡಿಡಿಪಿಐ ಅಂದಾನಪ್ಪ

ಹಾವೇರಿ: ನಿವೃತ್ತ ಶಿಕ್ಷಕರೊಬ್ಬರಿಂದ ಲಂಚ ಪಡೆಯುತ್ತಿದ್ದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಹಾಗೂ ದ್ವಿತೀಯ ದರ್ಜೆ ಸಹಾಯಕನನ್ನು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಶುಕ್ರವಾರ ವಶಕ್ಕೆ ಪಡೆದಿದ್ದಾರೆ.

ಡಿಡಿಪಿಐ ಅಂದಾನಪ್ಪ ವಡಗೇರಿ ಮತ್ತು ಎಸ್‌ಡಿಎ ದತ್ತಾತ್ರೇಯ ಕುಂಟೆ ಬಂಧಿರು ಎಂದು ತಿಳಿದು ಬಂದಿದೆ. 

ರಟ್ಟೀಹಳ್ಳಿಯ ಸರ್ಕಾರಿ ಉರ್ದು ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿರುವ ಮಹಮ್ಮದ್ ಗೌಸ್ ಎಂಬ ಶಿಕ್ಷಕ ತಮ್ಮ ನಿವೃತ್ತಿ ವೇತನ ಸೌಲಭ್ಯ ಪಡೆಯಲು ಅಗತ್ಯ ದಾಖಲಾತಿಗಳನ್ನು ನೀಡಿ ಅದನ್ನು ಸಂಬಂಧಪಟ್ಟ ಇಲಾಖೆಗೆ ಕಳುಹಿಸಲು ಕೋರಿದ್ದರು ಅದಕ್ಕಾಗಿ ಡಿಡಿಪಿಐ 7 ಸಾವಿರ ರೂ. ಲಂಚ ಕೇಳಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News