×
Ad

ಹಾವೇರಿ | ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ: ಮೂವರು ಕಾರ್ಮಿಕರು ಮೃತ್ಯು

Update: 2023-08-29 19:14 IST

ಹಾವೇರಿ: ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೂವರು ಸಜೀವ ದಹನಗೊಂಡಿರುವ ಘಟನೆ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ವರದಿಯಾಗಿದೆ.

ಮೃತರನ್ನು ದ್ಯಾಮಪ್ಪ ಓಲೇಕಾರ,ರಮೇಶ್ ಬಾರ್ಕಿ ಹಾಗೂ  ಶಿವಲಿಂಗ ಅಕ್ಕಿ ಎಂದು ಗುರುತಿಸಲಾಗಿದೆ.  ಮೃತರು ತಾಲೂಕಿನ ಕಾಟೇನಹಳ್ಳಿ ಗ್ರಾಮದ ನಿವಾಸಿಗಳು ಎನ್ನಲಾಗಿದೆ. 

ಇಲ್ಲಿನ ಸಾತೇನಹಳ್ಳಿ ಬಳಿ ಕುಮಾರ್ ಎಂಬುವವರಿಗೆ ಸೇರಿದ ಭೂಮಿಕಾ ಪಟಾಕಿ ಗೋದಾಮಿನ ಪಕ್ಕದಲ್ಲಿಯೇ ವೆಲ್ಡಿಂಗ್ ಕೆಲಸ ನಡೆಯುತ್ತಿದ್ದು, ಇದರ ಕಿಡಿಯೊಂದು ಪಟಾಕಿ ಗೋದಾಮಿಗೆ ತಗುಲಿ ಈ ಘಟನೆ ಸಂಭವಿಸಿದೆ ಎಂದು ಶಂಕೆ ವ್ಯಕ್ತವಾಗಿದೆ. 

ಇಂದು ಮಧ್ಯಾಹ್ನ ಈ ದುರಂತ ಸಂಭವಿಸಿದ್ದು, ಬೆಂಕಿ ಅವಘಡದ ವೇಳೆ ಇಲ್ಲಿನ ಕೆಲಸ ಮಾಡುತ್ತಿದ್ದ ಕಾರ್ಮಿಕರು ನಾಪತ್ತೆಯಾಗಿದ್ದರು. ಇದೀಗ ಮೂವರ ಮೃತದೇಹ ಪತ್ತೆಯಾಗಿದ್ದು, ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದ್ದಾರೆ ಎಂದು ತಿಳಿದುಬಂದಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಶೋಧ ಮುಂದುವರಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News