×
Ad

ಹಾವೇರಿ ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ ಪ್ರಕರಣ: ಮೃತರ ಸಂಖ್ಯೆ 4ಕ್ಕೆ ಏರಿಕೆ

Update: 2023-08-29 22:21 IST

ಹಾವೇರಿ: ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.  

ಮಂಗಳವಾರ ರಾತ್ರಿ ವೇಳೆ ಗೋದಾಮಿನಲ್ಲಿ ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ಸಂಜೆ ವೇಳೆ ದ್ಯಾಮಪ್ಪ ಓಲೇಕಾರ,ರಮೇಶ್ ಬಾರ್ಕಿ ಹಾಗೂ ಶಿವಲಿಂಗ ಅಕ್ಕಿ  ಎಂಬವರ ಮೃತದೇಹ ಪತ್ತೆಯಾಗಿತ್ತು.

ಘಟನೆ ವಿವರ: ಇಲ್ಲಿನ ಸಾತೇನಹಳ್ಳಿ ಬಳಿ ಕುಮಾರ್ ಎಂಬುವವರಿಗೆ ಸೇರಿದ ಭೂಮಿಕಾ ಪಟಾಕಿ ಗೋದಾಮಿನ ಪಕ್ಕದಲ್ಲಿಯೇ ವೆಲ್ಡಿಂಗ್ ಕೆಲಸ ನಡೆಯುತ್ತಿದ್ದು, ಇದರ ಕಿಡಿಯೊಂದು ಪಟಾಕಿ ಗೋದಾಮಿಗೆ ತಗುಲಿ ಈ ಘಟನೆ ಸಂಭವಿಸಿದೆ ಎಂದು ಶಂಕೆ ವ್ಯಕ್ತವಾಗಿದೆ. ಇಂದು ಮಧ್ಯಾಹ್ನ ಈ ದುರಂತ ಸಂಭವಿಸಿದೆ. 

ಐದು ಲಕ್ಷ ರೂ.ಗಳ ಪರಿಹಾರ ಘೋಷಣೆ 

ʼʼಹಾವೇರಿಯ ಆಲದಕಟ್ಟಿಯಲ್ಲಿನ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಾವಿಗೀಡಾದವರ ಕುಟುಂಬದವರಿಗೆ ತಲಾ ಐದು ಲಕ್ಷ ರೂ.ಗಳ ಪರಿಹಾರ ನೀಡಲಾಗುವುದುʼʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News