×
Ad

ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ

Update: 2023-09-01 15:08 IST

ಪ್ರಜ್ವಲ್ ರೇವಣ್ಣ

ಬೆಂಗಳೂರು: ಹಾಸನ ಸಂಸದ‌ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.

ಅರಕಲಗೂಡು ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ಹೊರಡಿಸಿದೆ. ಅಫಿಡವಿಟ್ ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಪ್ರಜ್ವಲ್ ರೇವಣ್ಣ ನಾಮಪತ್ರ ಅಫಿಡವಿಟ್​ನಲ್ಲಿ ಸುಳ್ಳು ಮಾಹಿತಿನೀಡಿ ಜನರನ್ನು ದಾರಿ ತಪ್ಪಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಹೀಗಾಗಿ ಪ್ರಜ್ವಲ್ ಅವರ ಸಂಸದ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಪರಾಜಿತ ಅಭ್ಯರ್ಥಿ ಅರಕಲಗೂಡು ಮಂಜು ಅವರು ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿ ಹೈಕೋರ್ಟಿನಲ್ಲಿ ತಿರಸ್ಕಾರಗೊಂಡಿತ್ತು. ಇದೀಗ ವಕೀಲ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ಆಧಾರದ ಮೇಲೆ ಹೈಕೋರ್ಟ್ ಈ ಮಹತ್ವದ ಆದೇಶ ಹೊರಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News