×
Ad

ಸಿದ್ದರಾಮಯ್ಯನವರೇ ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧದ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ: ಎಚ್‌ಡಿಕೆ ಆಕ್ರೋಶ

Update: 2025-06-09 14:35 IST

ಸಿಎಂ ಸಿದ್ದರಾಮಯ್ಯ/ಎಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು : ʼಸಿದ್ದರಾಮಯ್ಯನವರೇ ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ!?ʼ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು, ವಿಧಾನಸೌಧದ ಮುಂದೆ ಕಾಲ್ತುಳಿತ ಆಗಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಸಮರ್ಥನೆಗೆ ಆಕ್ರೋಶ ವಕ್ತಪಡಿಸಿದ್ದಾರೆ.

ಈ ಸಂಬಂದ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, "ವಿಧಾನಸೌಧ ಮೆಟ್ಟಿಲು ಮೇಲೆ ಸರಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ!. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ ಜನ ಸತ್ತಿದ್ದಾರೆ!!" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯನವರೇ ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ!?,ದಯವಿಟ್ಟು ಹೇಳುವಿರಾ? ಎಂದು ಅವರು ಪ್ರಶ್ನಿಸಿದ್ದಾರೆ.

ದುರಂತದ ಹೊಣೆಯನ್ನು ಪೊಲೀಸರ ಮೇಲಷ್ಟೇ ಎತ್ತಿಹಾಕಿ 'ಕೈ' ತೊಳೆದುಕೊಳ್ಳುವುದು ಎಷ್ಟು ಸರಿ? ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ? ಎಂದು ಟೀಕಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News