×
Ad

ಬಿಜೆಪಿ-ಜೆಡಿಎಸ್ ಮೈತ್ರಿ | ಆರ್.ಅಶೋಕ್ ಅವರಿಗೆ ದೂರವಾಣಿ ಕರೆ ಮಾಡಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?

Update: 2023-09-12 20:46 IST

ಬೆಂಗಳೂರು: ಮುಂಬರಲಿರುವ ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ  ವಿಚಾರವಾಗಿ ಬಿಜೆಪಿ ಶಾಸಕ ಆರ್. ಅಶೋಕ್ ಅವರಿಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಈ ಬಗ್ಗೆ ಮಾಹಿತಿ ನೀಡಿದರು. 

ʼʼಮಾಜಿ ಪ್ರಧಾನಿ ಎಚ್.‌ಡಿ. ದೇವೇಗೌಡ ಅವರು ರಾಜಕೀಯ ಜೀವನದಲ್ಲೇ ಮೊದಲ ಬಾರಿ ಬಿಜೆಪಿ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆʼʼ ಎಂದು ಹೇಳಿದರು. 

ʼʼಈಗಷ್ಟೇ ನನಗೆ ಮಾಜಿ ಸಿಎಂ ಕುಮಾರಸ್ವಾಮಿ ಕರೆ ಮಾಡಿದ್ದರು. ಎಲ್ಲವೂ ಒಳ್ಳೆಯದಾಗುತ್ತದೆ ಬ್ರದರ್, ಒಟ್ಟಿಗೆ ಕೆಲಸ ಮಾಡಿಕೊಂಡು ಹೋಗೋಣʼʼ ಎಂದು ಕುಮಾರಸ್ವಾಮಿ ಹೇಳಿದರು ಎಂದು ಅಶೋಕ್ ತಿಳಿಸಿದರು. 

ನಿನ್ನೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪಗೆ ಕುಮಾರಸ್ವಾಮಿ ಕರೆ ಮಾಡಿ ಮಾತುಕತೆ ನಡೆಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News