×
Ad

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಎಚ್‌.ಡಿ.ಕುಮಾರಸ್ವಾಮಿ

Update: 2024-06-19 16:17 IST

Photo : x/@hd_kumaraswamy

ಹೊಸದಿಲ್ಲಿ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸಮಾಲೋಚನೆ ನಡೆಸಿದರು.

ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದ ಕುಮಾರಸ್ವಾಮಿಯವರು, ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವುದು. ಹೊಸ ರೈಲ್ವೆ ಮಾರ್ಗಗಳಿಗೆ ಅನುಮೋದನೆ ನೀಡಿ, ಹಣಕಾಸು ನೆರವು ಒದಗಿಸುವ ಬಗ್ಗೆ ರೈಲ್ವೆ ಸಚಿವರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.

ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೆಗೌಡ ಅವರ ಕಾಲದಲ್ಲಿ ಮಂಜೂರಾಗಿದ್ದ ಬೆಂಗಳೂರು - ಸತ್ಯಮಂಗಲ - ಚಾಮರಾಜನಗರ (ಕನಕಪುರ - ಮಳವಳ್ಳಿ ಮಾರ್ಗವಾಗಿ) ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಲು ರೈಲ್ವೆ ಸಚಿವರನ್ನು ಎಚ್‌ಡಿಕೆ ಕೋರಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News