×
Ad

ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದ ಎಚ್‌.ಡಿ. ಕುಮಾರಸ್ವಾಮಿ

Update: 2024-06-24 11:46 IST

Photo:X/ANI

ಹೊಸದಿಲ್ಲಿ: ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಲೋಕಸಭೆಯ ನೂತನ ಸಂಸದರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಗಮನ ಸೆಳೆದರು.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಅಲಿಯಾಸ್ ಸ್ಟಾರ್ ಚಂದ್ರು ವಿರುದ್ಧ 2,84,620 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿಯೂ ಆದ ಎಚ್.ಡಿ.ಕುಮಾರಸ್ವಾಮಿ, ನಂತರ ಎನ್‌ಡಿಎ ಸರಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು.

ಇದಕ್ಕೂ ಮುನ್ನ, 1967ರಲ್ಲಿ ಪ್ರಪ್ರಥಮ ಬಾರಿಗೆ ಸಂಸದರಾಗಿ ಚುನಾಯಿತರಾಗಿದ್ದ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲ್, ಲೋಕಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಹೊಸ ಪರಂಪರೆಗೆ ನಾಂದಿ ಹಾಡಿದ್ದರು.

ಈ ಬಾರಿಯ ಲೋಕಸಭಾ ಅಧಿವೇಶನದಲ್ಲಿ ಕರ್ನಾಟಕದಿಂದ ಚುನಾಯಿತರಾಗಿರುವ ಬಹುತೇಕ ನೂತನ ಸಂಸದರು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಲು ನಿರ್ಧರಿಸಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News