×
Ad

ಕೆ.ಆರ್.ನಗರದ ಸಂತ್ರಸ್ತೆಯ ಅಪಹರಣ ಪ್ರಕರಣ | ಬಂಧನ‌ದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಎಚ್.ಡಿ.ರೇವಣ್ಣ ಅರ್ಜಿ

Update: 2024-05-03 15:44 IST

ಬೆಂಗಳೂರು : ಮೈಸೂರಿನ‌ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಮತ್ತೆ ಬಂಧನದ ಭೀತಿ ಎದುರಿಸುತ್ತಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಇಂದು ಎಸ್ಐಟಿ ಮುಂದೆ ಹಾಜರಾಗಬೇಕಿದ್ದ ಎಚ್.ಡಿ.ರೇವಣ್ಣ ಕೋರ್ಟ್ ಗೆ ನೇರ ಹಾಜರಾಗಿ ಜಾಮೀನು ಪಡೆಯಲು ಬಯಸಿದ್ದರು. ಆದರೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಕೊನೇ ಗಳಿಗೆಯಲ್ಲಿ ಹಾಜರಾತಿಯಿಂದ ಎಚ್.ಡಿ.ರೇವಣ್ಣ ಹಿಂದೆ ಸರಿದಿದ್ದಾರೆ. ಕೆ.ಆರ್.ನಗರದಲ್ಲಿ ಸಂತ್ರಸ್ತೆಯನ್ನು ಅಪಹರಣ ಮಾಡಿರುವ ಆರೋಪ ಹೊರಸಿ‌ ಪುತ್ರ ದೂರು ದಾಖಲಿಸಿದ್ದು, ಪೊಲೀಸರು ಎಫ್ಐಆರ್ ನಲ್ಲಿ ಜಾಮೀನು ರಹಿತ ಪ್ರಕರಣ ದಾಖಲಿಸಿದ್ದಾರೆ.

ಅಪಹರಣ ಆರೋಪ ಜಾಮೀನು ರಹಿತ ಪ್ರಕರಣವಾಗಿರುವುದರಿಂದ ಬಂಧನ ಭೀತಿಯಿಂದ ಎಚ್.ಡಿ.ರೇವಣ್ಣ‌ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News