×
Ad

ತಜ್ಞರ ವರದಿಯಲ್ಲಿ ಆತಂಕಕಾರಿ ಮಾಹಿತಿ; ಹೃದಯಾಘಾತ ಧೂಮಪಾನಿಗಳಲ್ಲಿಯೇ ಹೆಚ್ಚು

Update: 2025-07-07 19:47 IST

ಸಾಂದರ್ಭಿಕ ಚಿತ್ರ | PC : freepik

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಹಠಾತ್ ಹೃದಯಾಘಾತದ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಕೆ.ಎಸ್.ರವೀಂದ್ರನಾಥ್ ನೇತೃತ್ವದ 12 ತಜ್ಞರ ತಂಡವು ಈ ಅಧ್ಯಯನ ನಡೆಸಿ ರಾಜ್ಯ ಸರಕಾರಕ್ಕೆ ವರದಿ ಸಲ್ಲಿಕೆ ಮಾಡಿದ್ದು, ಇದರಲ್ಲಿ ಶೇ.50ಕ್ಕಿಂತ ಹೆಚ್ಚು ಹೃದಯಾಘಾತಗಳು ಧೂಮಪಾನಿಗಳಲ್ಲಿ ಕಂಡುಬಂದಿದೆ.

ಧೂಮಪಾನ ಯುವಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತಕ್ಕೆ ಪ್ರಮುಖ ಕಾರಣವೆಂಬುದಾಗಿ ತಜ್ಞರ ವರದಿಯಲ್ಲಿ ಬೆಳಕಿಗೆ ಬಂದಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ನಿಷೇಧ ಜಾರಿಯಲ್ಲಿದ್ದು, ಅದರ ಕಡ್ಡಾಯವಾಗಿ ಪಾಲಿಸುವುದನ್ನು ಖಚಿತಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಈ ಕುರಿತು ಪ್ರತಿಕ್ರಿಯಿಸಿದ ಡಾ.ಕೆ.ಎಸ್.ರವೀಂದ್ರನಾಥ್, ರಾಜ್ಯದಲ್ಲಿ 250 ಜನರ ಮೇಲೆ ಅಧ್ಯಯನ ನಡೆಸಿದ್ದು, ಶೇ.98ರಷ್ಟು ಮಂದಿ ಲಸಿಕೆ ಪಡೆದಿದ್ದರು. ಆದರೆ ಮಧುಮೇಹ, ಒತ್ತಡ, ಧೂಮಪಾನ ಹಾಗೂ ಒಬೆಸಿಟಿಯಂತಹ ಜೀವಶೈಲಿಯ ಸಂಗತಿಗಳು ಪ್ರಮುಖ ಕಾರಣಗಳಾಗಿವೆ. ಹೃದಯಾಘಾತಕ್ಕೂ ಕೋವಿಡ್ ಲಸಿಕೆಗೆ ನೇರ ಸಂಬಂಧ ಇಲ್ಲ ಎಂದು ಮಾಹಿತಿ ನೀಡಿದರು.

ಇನ್ನೂ, ತಜ್ಞರ ವರದಿಯ ಪ್ರಕಾರ, ಒಟ್ಟು 251 ಮಂದಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ. 218 ಜನ ಪುರುಷರಿದ್ದು, 33 ಮಹಿಳೆಯರನ್ನು ಅಧ್ಯಯನಕ್ಕೆ ಒಳಪಡಿಸಲಾಗಿದೆ. 251 ರೋಗಿಗಳಲ್ಲಿ 87 ಮಂದಿಯಲ್ಲಿ ಮಧುಮೇಹ ಕಂಡುಬಂದಿದೆ. 102 ರೋಗಿಗಳಿಗೆ ಬಿಪಿ, 35 ಸಕ್ಕರೆ ಕಾಯಿಲೆ ಇದೆ.

40 ಮಂದಿಗೆ ಹೃದಯ ಸಂಬಂಧಿ ಕಾಯಿಲೆ ಇದೆ. 111 ಮಂದಿ ಧೂಮಪಾನಿಗಳಾಗಿದ್ದಾರೆ. 19 ಮಂದಿಗೆ ಕೊವಿಡ್ ಸೋಂಕೊನ ಹಿನ್ನೆಲೆ ಇತ್ತು. ಇನ್ನುಳಿದ 77 ಮಂದಿಗೆ ಯಾವುದೇ ರೋಗಗಳು ಇರಲಿಲ್ಲ ಎಂದು ಹೇಳಲಾಗಿದೆ.

ಸದ್ಯ ನ್ಯೂರಾಲಜಿಕಲ್ ಸಮಸ್ಯೆಯ ಅಧ್ಯಯನ ಬಾಕಿ ಇದ್ದು, ನಿಮ್ಹಾನ್ಸ್ ತಜ್ಞರು ವರದಿ ಕೊಟ್ಟ ಬಳಿಕ ಅಂತಿಮ ವರದಿ ಸಲ್ಲಿಕೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಅತಿಹೆಚ್ಚು ಹೃದಯಾಘಾತಕ್ಕೆ ಕಾರಣ?

-ಅತಿಯಾದ ಮೊಬೈಲ್ ಬಳಕೆ

-ಜನರ ಬದುಕಿನ ಶೈಲಿ

-ಮಧುಮೇಹ

-ಒಬೆಸಿಟಿ (ಅತಿಯಾದ ಬೊಜ್ಜು)

-ಹೆಚ್ಚಿನ ತೂಕ

-ಕೋವಿಡ್ ಸಂದರ್ಭದಲ್ಲಿ ಇತರೆ ಔಷಧಿ ಬಳಕೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News