ಸಾಂದರ್ಭಿಕ ಚಿತ್ರ

ಬೆಂಗಳೂರು : ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 1ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಸಹಿತ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸೆ.29ರ ಮಂಗಳವಾರ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಜೋರಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.

ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಮತ್ತು ಜೋರಾದ ಗಾಳಿ ಬೀಸುವ ಸಾಧ್ಯತೆ ಇದೆ.

ಸೆ.30ರ ಬುಧವಾರ ಬಳ್ಳಾರಿ, ಚಾಮರಾಜನಗರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಬೆಂಗಳೂರು ದಕ್ಷಿಣ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ಜೋರಾದ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅ.1ರ ಗುರುವಾರ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ. ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಅ.2ರ ಶುಕ್ರವಾರ ಮೈಸೂರು, ಶಿವಮೊಗ್ಗ ಜಿಲ್ಲೆಗಳು. ಚಿಕ್ಕಮಗಳೂರು, ಹಾಸನ, ಕೊಡಗಿನ ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಬೆಂಗಳೂರು ದಕ್ಷಿಣ, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಸೆ.29 ಮತ್ತು ಸೆ.30ರಂದು ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆ ಹಾಗೂ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಬಹುತೇಕ ಒಣ ಹವಾಮಾನವಿರುವ ಸಾಧ್ಯತೆಯಿದೆ.

ಸೆ.28ರಿಂದ ಅ.3ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor