×
Ad

ಭಾರೀ ಮಳೆ: ಶಿವಮೊಗ್ಗ ಜಿಲ್ಲೆಯಲ್ಲಿ 'ಆರೆಂಜ್‌ ಅಲರ್ಟ್‌'; ನಾಳೆ (ಜು.24) ಶಾಲೆಗಳಿಗೆ ರಜೆ

Update: 2023-07-23 20:34 IST
ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರೆದಿದ್ದು,ಈ ನಡುವೆ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಪ್ರಕಟಿಸಿದೆ.

ಮುಂದಿನ 3 ಗಂಟೆಯಲ್ಲಿ ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಡಗು, ಶಿವಮೊಗ್ಗ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಇನ್ನೊಂದೆಡೆ, ಇವತ್ತು ಹೊಸನಗರ, ಸಾಗರ ಮತ್ತು ತೀರ್ಥಹಳ್ಳಿ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಅಲರ್ಟ್‌ ನೀಡಲಾಗಿದೆ.

ರಜೆ ಘೋಷಣೆ:

ಶಿವಮೊಗ್ಗ: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಎಲ್ಲ ಶಾಲೆಗಳಿಗೆ ಸೋಮವಾರ (ಜು.24) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ನಾಲ್ಕು ದಿನಗಳಿಂದ ಮಳೆ ಅಬ್ಬರಿಸುತ್ತಿದ್ದು ಶನಿವಾರ ರಾತ್ರಿಯಿಂದ ಮಳೆ ಬಿರುಸುಗೊಂಡಿದೆ. ಭಾನುವಾರ ಇಡೀ ದಿನ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಸೋಮವಾರ ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News