×
Ad

ರಾಜ್ಯದ ವಿವಿಧೆಡೆ ಭಾರೀ ಮಳೆ: ಜು.26ಕ್ಕೆ ಡಿಸಿಗಳ ಜತೆ ಸಿಎಂ ಸಿದ್ದರಾಮಯ್ಯ ವಿಡಿಯೋ ಸಂವಾದ

Update: 2023-07-24 23:49 IST

ಬೆಂಗಳೂರು, ಜು. 24: ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಎರಡು-ಮೂರು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಆ ಹಿನ್ನೆಲೆಯಲ್ಲಿ ಪರಿಸ್ಥಿತಿ ತಿಳಿದುಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಜು.26ರ ಸಂಜೆ 4ಗಂಟೆಗೆ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಲಿದ್ದು, ಸಂಬಂಧಪಟ್ಟ ಇಲಾಖೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಹಿರಿಯ ಅಧಿಕಾರಿಗಳು ಮೇಲ್ಕಂಡ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಹವಾಮಾನ ಮತ್ತು ಮಳೆ ಬೆಳೆ ಪರಿಸ್ಥಿತಿ ಮಾಹಿತಿ ಪಡೆಯಲಿದ್ದು, ಮುನ್ನಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸಲಹೆ-ಸೂಚನೆಗಳನ್ನು ನೀಡುವ ಸಾಧ್ಯತೆಗಳಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News